Homeಕರೋನಾ ತಲ್ಲಣಗೃಹ ಸಚಿವರು ಏಮ್ಸ್‌‌ನಲ್ಲಿ ಯಾಕೆ ದಾಖಲಾಗಿಲ್ಲ: ಕಾಂಗ್ರೆಸ್ ಸಂಸದ ಶಶಿ ತರೂರ್

ಗೃಹ ಸಚಿವರು ಏಮ್ಸ್‌‌ನಲ್ಲಿ ಯಾಕೆ ದಾಖಲಾಗಿಲ್ಲ: ಕಾಂಗ್ರೆಸ್ ಸಂಸದ ಶಶಿ ತರೂರ್

55 ವರ್ಷದ ಅಮಿತ್ ಷಾ ಅವರನ್ನು ಗುರ್‌ಗಾಂವ್‌ನ ಮೆಡಂತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -

ಕೊರೊನಾ ವೈರಸ್‌ ಸೋಂಕಿಗೆ ಒಳಗಾದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿರುವುದು ಏಕೆ ಎಂದು ಸಂಸದ ಶಶಿ ತರೂರ್‌ ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳ ಬಗ್ಗೆ ಜನರಲ್ಲಿ ಆತ್ಮವಿಶ್ವಾಸ ತುಂಬಬೇಕಾದರೆ ಪ್ರಬಲರ ಪ್ರೋತ್ಸಾಹ ಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

55 ವರ್ಷದ ಅಮಿತ್ ಷಾ ಅವರನ್ನು ಗುರ್‌ಗಾಂವ್‌ನ ಮೆಡಂತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಭಾನುವಾರ ಮಾಡಿದ್ದ ಟ್ವೀಟ್‌ನಲ್ಲಿ, ತಮ್ಮ ಆರೋಗ್ಯವು ಉತ್ತಮವಾಗಿದೆ, ಆದರೆ ವೈದ್ಯರ ಸಲಹೆಯ ಮೇರೆಗೆ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಹೇಳಿದರು.

ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ, ದಯವಿಟ್ಟು ಪ್ರತ್ಯೇಕತೆಯಲ್ಲಿರಿ. ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದ್ದರು.

1956 ರಲ್ಲಿ ಜವಾಹರಲ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ಏಮ್ಸ್ ಸ್ಥಾಪಿಸಲಾಯಿತು. “ನಮ್ಮ ಗೃಹ ಸಚಿವರು ಅನಾರೋಗ್ಯದಿಂದ ಬಳಲುತ್ತಿರುವಾಗ ಏಮ್ಸ್‌ಗೆ ಏಕೆ ಹೋಗಬಾರದು. ನೆರೆಯ ರಾಜ್ಯದ ಖಾಸಗಿ ಆಸ್ಪತ್ರೆಗೆ ಏಕೆ ಹೋಗಬೇಕು. ಸಾರ್ವಜನಿಕ ಸಂಸ್ಥೆಗಳಿಗೆ ಸಾರ್ವಜನಿಕರ ವಿಶ್ವಾಸವನ್ನು ಪ್ರೇರೇಪಿಸಬೇಕಾದರೆ ಪ್ರಬಲರ ಪ್ರೋತ್ಸಾಹ ಬೇಕು ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ಕ್ರಮವಾಗಿ ಬೆಂಗಳೂರು ಮತ್ತು ಭೋಪಾಲ್‌ನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.

77 ವರ್ಷದ ಶ್ರೀ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 61 ವರ್ಷದ ಚೌಹಾನ್ ಅವರನ್ನು ಭೋಪಾಲ್‌ನ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮಿತ್ ಶಾ ಕಳೆದ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೇರಿದಂತೆ ಎಲ್ಲ ಉನ್ನತ ಸಚಿವರು ಭಾಗವಹಿಸಿದ್ದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಿದ ನಿರ್ಣಾಯಕ ಸಭೆಯಲ್ಲಿ ಸಾಮಾಜಿಕ ದೂರವನ್ನು ಒಳಗೊಂಡಂತೆ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿತ್ತು.


ಇದನ್ನೂ ಓದಿ: ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...