Homeಅಂತರಾಷ್ಟ್ರೀಯಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ; IPL-2020 ಯ ಪ್ರಾಯೋಜಕತ್ವ ತೊರೆದ VIVO

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ; IPL-2020 ಯ ಪ್ರಾಯೋಜಕತ್ವ ತೊರೆದ VIVO

ವಿವೋ 2018 ರಲ್ಲಿ ಐದು ವರ್ಷಗಳ ಒಪ್ಪಂದಕ್ಕೆ 2,199 ಕೋಟಿ ರೂ. ಪಾವತಿಸಿತ್ತು. ಎಲ್ಲಾ ಪ್ರಾಯೋಜಕರನ್ನು ಉಳಿಸಿಕೊಳ್ಳಲಾಗುತ್ತಿದೆ ಎಂದು ಬಿಸಿಸಿಐ ಭಾನುವಾರ ಪ್ರಕಟಿಸಿತ್ತು.

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಹಿನ್ನಡೆ ಉಂಟಾದ ಹಿನ್ನೆಲೆಯಲ್ಲಿ ಈ ವರ್ಷದ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಶೀರ್ಷಿಕೆ ಪ್ರಾಯೋಜಕತ್ವದಿಂದ ವಿವೋ ಹೊರಬಿದ್ದಿದೆ.

ವಿವೋ 2018 ರಲ್ಲಿ ಐದು ವರ್ಷಗಳ ಒಪ್ಪಂದಕ್ಕೆ 2,199 ಕೋಟಿ ರೂ. ಪಾವತಿಸಿತ್ತು. ಎಲ್ಲಾ ಪ್ರಾಯೋಜಕರನ್ನು ಉಳಿಸಿಕೊಳ್ಳಲಾಗುತ್ತಿದೆ ಎಂದು ಬಿಸಿಸಿಐ ಭಾನುವಾರ ಪ್ರಕಟಿಸಿತ್ತು, ಆದರೆ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವೋ ಹೊರಬಿದ್ದಿದೆ.

2020 ರ ಪಂದ್ಯಾಟವನ್ನು ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ಯುಎಇ ಯಲ್ಲಿ ಆಡಲಾಗುವುದು ಎಂದು ಭಾರತೀಯ ಕ್ರಿಕೆಟ್ ಮಂಡಳಿ ಭಾನುವಾರ ಪ್ರಕಟಿಸಿತ್ತು.

ಐಪಿಎಲ್ ಆಡಳಿತ ಮಂಡಳಿ ಸದಸ್ಯ ಐಪಿಎಲ್ 2020 ಕ್ಕೆ ಎಲ್ಲ ಪ್ರಾಯೋಜಕರನ್ನು ಉಳಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾಗಿ ಪಿಟಿಐ ವರದಿ ಮಾಡಿತ್ತು.

ಐಪಿಎಲ್ 2020 ಯುಎಇಯ ದುಬೈ, ಶಾರ್ಜಾ ಮತ್ತು ಅಬುಧಾಬಿ ಹೀಗೆ ಮೂರು ಸ್ಥಳಗಳಲ್ಲಿ ನಡೆಯಲಿದೆ, ಇದಕ್ಕೆ ಸರ್ಕಾರ ಅನುಮೋದನೆ ನೀಡಿತ್ತು.

“ವಿವೋ ಐಪಿಎಲ್ 2020 ಆವೃತ್ತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ತೀರ್ಮಾನಿಸಲು ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿ (ಐಪಿಎಲ್ ಜಿಸಿ) ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಸೇರಿತು. ಭಾರತದಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಜಿಸಿ ಪಂದ್ಯಾವಳಿಯನ್ನು ಯುಎಇ ಯಲ್ಲಿ ನಡೆಸಲು ನಿರ್ಧರಿಸಿತು. ಇದಕ್ಕಾಗಿ ಭಾರತ ಸರ್ಕಾರದಿಂದ ಅಗತ್ಯವಾದ ಅನುಮತಿಗಳಿಗೆ ಪಡೆಯಲಾಗುವುದು” ಎಂದು ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

“ಐಪಿಎಲ್ 2020 ಸೆಪ್ಟೆಂಬರ್ 19 ರಿಂದ ನಡೆಯಲಿದೆ ಮತ್ತು ಫೈನಲ್ ಪಂದ್ಯವು ನವೆಂಬರ್ 10, 2020 ರಂದು ನಡೆಯಲಿದೆ. 53 ದಿನಗಳ ಪಂದ್ಯಾವಳಿಯಲ್ಲಿ ಮಧ್ಯಾಹ್ನದ ಪಂದ್ಯಗಳು 15:30 IST ರಿಂದ ಪ್ರಾರಂಭವಾಗಲಿದ್ದು, ಸಂಜೆಯ ಪಂದ್ಯಗಳು 19:30 IST ಕ್ಕೆ ಪ್ರಾರಂಭವಾಗುತ್ತವೆ.”


ಓದಿ: VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...