Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...