Homeಮುಖಪುಟಬಿಜೆಪಿ ನಾಯಕರ ದ್ವೇಷ ಭಾಷಣ ಪ್ರಕರಣದ ತೀರ್ಪು ತ್ವರಿತವಾಗಿ ನೀಡಿ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್

ಬಿಜೆಪಿ ನಾಯಕರ ದ್ವೇಷ ಭಾಷಣ ಪ್ರಕರಣದ ತೀರ್ಪು ತ್ವರಿತವಾಗಿ ನೀಡಿ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್

ಫೆಬ್ರವರಿಯಲ್ಲಿ ನಡೆದಿದ್ದ ಗಲಭೆಯಿಂದ ಐವತ್ತಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು.

- Advertisement -
- Advertisement -

ದೆಹಲಿ ಗಲಭೆಗೂ ಮುಂಚೆ ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರುಗಳಾದ ಕಪಿಲ್ ಮಿಶ್ರಾ, ಅನುರಾಗ್ ಠಾಕುರ್, ಪರ್ವೇಶ್ ವರ್ಮ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಕೋರಿದ್ದ ಅಪೀಲಿನ ಕುರಿತು ತ್ವರಿತ ತೀರ್ಪು ನೀಡುವಂತೆ ದಿಲ್ಲಿ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

ಬೃಂದಾ ಕಾರಟ್ ತಮ್ಮ ಅಪೀಲಿನಲ್ಲಿ, ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಈ ಬಿಜೆಪಿ ನಾಯಕರ ಧ್ವೇಷ ಭಾಷಣವೆ ಪ್ರಚೋದನೆ ನೀಡಿತ್ತೆಂದು ಆರೋಪಿಸಿದ್ದರು.

ಬೃಂದಾ ಕಾರಟ್ ಅವರ ಅಪೀಲಿನ ಕುರಿತು ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಡಿ. ಎನ್. ಪಟೇಲ್ ಹಾಗೂ ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಪೀಠ, ಅಪೀಲಿನ ವಿಚಾರಣೆ ನಡೆಸುತ್ತಿರುವ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದೆ.

ಮ್ಯಾಜಿಸ್ಟೀರಿಯಲ್ ನ್ಯಾಯಾಲಯವು ಬೃಂದಾ ಕಾರಟ್ ಅಪೀಲಿನ ಮೇಲಿನ ಆದೇಶವನ್ನು ಕಾದಿರಿಸಿದ ನಂತರ ಅವರ ವಕೀಲರು ದಿಲ್ಲಿ ಹೈಕೋರ್ಟಿನ ಮೊರೆ ಹೋಗಿದ್ದರು.

ವಿಚಾರಣಾ ನ್ಯಾಯಾಲಯವು ಪ್ರಕರಣವನ್ನು ಕಾನೂನು, ನೀತಿ ನಿಯಮಾವಳಿಗಳು ಹಾಗೂ ಅನ್ವಯವಾಗುವ ಸರಕಾರದ ನೀತಿಗಳಂತೆ ಆದಷ್ಟು ಬೇಗ ಇತ್ಯರ್ಥಪಡಿಸಬೇಕೆಂದು ದಿಲ್ಲಿ ಹೈಕೋರ್ಟ್ ಆದೇಶಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಗಲಭೆಯು 50 ಕ್ಕಿಂತ ಹೆಚ್ಚು ಜನರನ್ನು ಬಲಿ ಪಡೆದಿತ್ತು.


ಓದಿ: ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ. ಧಾರ್ಮಿಕ...