Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...