Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...