Homeಮುಖಪುಟಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನನ್ನ ಹಲ್ಲುಗಳು ಮುರಿದಿವೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದು ಊದಿಕೊಂಡಿದೆ. ಕೆನ್ನೆಗೆ ಮೂಗುಪೆಟ್ಟು ಬಿದ್ದಿದೆ  ಹಲ್ಲೆ ಸಮಯದಲ್ಲಿ ತನ್ನ ವಾಚ್ ಮತ್ತು ಹಣವನ್ನು ದೋಚಲಾಗಿದೆ ಎಂದು ಸಂತ್ರಸ್ತ ಆರೋಪಿಸಿದ್ದಾರೆ.

- Advertisement -
- Advertisement -

ಮೋದಿ ಜಿಂದಾಬಾದ್ ಮತ್ತು ಜೈ ಶ್ರೀ ರಾಮ್ ಎಂದು ಕೂಗಲು ನಿರಾಕರಿಸಿದ ರಾಜಸ್ಥಾನದ ಸಿಕಾರ್ ಜಿಲ್ಲೆಯ 52 ವರ್ಷದ ಮುಸ್ಲಿಂ ಆಟೋರಿಕ್ಷಾ ಚಾಲಕನ ಮೇಲೆ ತೀವ್ರ ಹಲ್ಲೆ ಮಾಡಲಾಗಿದೆ. ಇದರ ವಿರುದ್ಧ ಗಫ್ಫಾರ್ ಅಹ್ಮದ್ ಕಚ್ಚಾವಾ ಅವರು ದೂರು ದಾಖಲಿಸಿದ್ದಾರೆ.

ನನ್ನ ಹಲ್ಲುಗಳು ಮುರಿದಿವೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದು ಊದಿಕೊಂಡಿದೆ. ಕೆನ್ನೆಗೆ ಮೂಗುಪೆಟ್ಟು ಬಿದ್ದಿದೆ  ಹಲ್ಲೆ ಸಮಯದಲ್ಲಿ ತನ್ನ ವಾಚ್ ಮತ್ತು ಹಣವನ್ನು ದೋಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಗಫ್ಫಾರ್ ಅಹ್ಮದ್ ಕಚ್ಚಾವಾ ಅವರು ಶುಕ್ರವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹತ್ತಿರದ ಹಳ್ಳಿಗೆ ಬಿಟ್ಟು ಹಿಂದಿರುಗುತ್ತಿದ್ದಾಗ SUV ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ತಂಬಾಕು ಕೇಳುವ ನೆಪದಲ್ಲಿ ತಡೆದರು. ನಂತರ ತಂಬಾಕು ನೀಡಲು ಮುಂದಾದಾಗ ಗಡ್ಡವನ್ನು ನೋಡಿ “ಮೋದಿ ಜಿಂದಾಬಾದ್” ಎಂದು ಹೇಳುವಂತೆ ಒತ್ತಾಯಿಸಿದರು. ಅವರು ನಿರಾಕರಿಸಿದಾಗ, ಆರೋಪಿಗಳು ಕಪಾಳಕ್ಕೆ ಹೊಡೆದಿದ್ದಾರೆ, ಪಾಕಿಸ್ತಾನಕ್ಕೆ ಹೋಗು ಎಂದು ಗದರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಚ್ಚಾವಾ ಅಲ್ಲಿಂದ ತಪ್ಪಿಸಿಕೊಳ್ಳಲೆತ್ನಿಸಿದರೂ ಸಹ ಅವರು ಹಿಂಬಾಲಿಸಿ ಥಳಿಸಿದ್ದಾರೆ. ಧಾರ್ಮಿಕ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ್ದಾರೆ. ನಂತರ ಅವನ ಪರ್ಸ್, ವಾಚ್ ಮತ್ತು 700 ರೂ ಹಣವನ್ನು ಸಹ ಕಿತ್ತುಕೊಂಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಗಗನ್‌ದೀಪ್ ಸಿಂಗ್ಲಾ ತಿಳಿಸಿದ್ದಾರೆ.

“ನನ್ನ ಎಡಗಣ್ಣು, ಕೆನ್ನೆ ಮತ್ತು ತಲೆಯ ಮೇಲೆ ಗಂಭೀರವಾದ ಗಾಯಗಳಾಗಿದ್ದು, ಅವರು ನನ್ನ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ನನ್ನನ್ನು ಹೊಡೆದ ನಂತರ, ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿದ ನಂತರವೇ ವಿಶ್ರಾಂತಿ ಪಡೆಯುತ್ತೇವೆ ಎಂದು ಹೇಳಿದರು” ಎಂದು ಅವರು ದೂರು ನೀಡಿದ್ದಾರೆ.

“ಎಫ್ಐಆರ್ ದಾಖಲಾದ ನಂತರ, ಶಂಭು ದಯಾಳ್ ಜಾಟ್(35), ರಾಜೇಂದ್ರ ಜಾಟ್ (30) ಎಂಬ ಇಬ್ಬರನ್ನು ನಾವು ನಿನ್ನೆ ಬಂಧಿಸಿದ್ದೇವೆ. ಪ್ರಾಥಮಿಕ ತನಿಖೆಯಿಂದ ಈ ಇಬ್ಬರು ತಮ್ಮ ವಾಹನವನ್ನು ನಿಲ್ಲಿಸಿ ಮದ್ಯ ಸೇವಿಸುತ್ತಿದ್ದರು. ನಂತರ ಕಚ್ಚಾವಾ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಸಾದರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಪುಷ್ಪೇಂದ್ರ ಸಿಂಗ್ ತಿಳಿಸಿದ್ದಾರೆ.

295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ) ಮತ್ತು 504 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಅನೇಕ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನನ್ನು ಅರೆಬೆತ್ತಲುಗೊಳಿಸಿ ಹಲ್ಲೆ: 13ಕ್ಕು ಹೆಚ್ಚು ಜನರ ವಿರುದ್ಧ FIR, ಬಂಧನಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...