Homeಕರ್ನಾಟಕದೇವರೇ ಕಾಪಾಡಬೇಕು ಎಂದಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಕೊರೊನಾ ಪಾಸಿಟಿವ್!

ದೇವರೇ ಕಾಪಾಡಬೇಕು ಎಂದಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಕೊರೊನಾ ಪಾಸಿಟಿವ್!

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಎದುರಿಸಲಾಗದೇ ದೇವರೇ ಕಾಪಾಡಬೇಕು ಎಂದಿದ್ದ ಕರ್ನಾಟಕದ ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಸ್ವತಃ ಅವರೇ ಟ್ವೀಟ್‌ ಮಾಡಿದ್ದು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ” ಎಂದಿದ್ದಾರೆ.

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಅವರು ತಿಳಿದಿದ್ದಾರೆ.


ಇದನ್ನೂ ಓದಿ: ಅಮಿತ್ ಶಾ ಕೋವಿಡ್ ನೆಗೆಟಿವ್: ಟ್ವೀಟ್‌ ಡಿಲೀಟ್ ಮಾಡಿದ ಮನೋಜ್ ತಿವಾರಿ! ಹೊಸ ಪರೀಕ್ಷೆ ಮಾಡಿಲ್ಲವೆಂದ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...