ತನ್ನ ತಾಯಿಯೊಂದಿಗೆ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರೊಬ್ಬರ ಪುತ್ರ SSLC ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಗಳಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.
ಇಂದಿರಾ ನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರದ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಮಹೇಶ ಎಂಬವವರೇ ಈ ಸಾಧಕನಾಗಿದ್ದಾರೆ. ಮಹೇಶನು ಯಾದಗಿರಿಯಿಂದ ತಮ್ಮ ಪೋಷಕರೊಂದಿಗೆ ಬೆಂಗಳೂರಿಗೆ ವಲಸೆ ಕಾರ್ಮಿಕರಾಗಿ ಬಂದಿದ್ದರು.
ವಿದ್ಯಾರ್ಥಿಯ ತಾಯಿ ಮಲ್ಲವ್ವ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದು, ವಿದ್ಯಾರ್ಥಿ ಕೂಡಾ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ.
ಮಹೇಶ ಪಿಯುಸಿಯಲ್ಲಿ ವಿಜ್ಞಾನ ವಿಷಯಗಳನ್ನು ಓದಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ಅವರು ವಿದ್ಯಾರ್ಥಿಯನ್ನು ಭೇಟಿಯಾಗಿ ವಿದ್ಯಾರ್ಥಿ ಹಾಗೂ ಅವರ ತಾಯಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
https://t.co/GwpF9pfM0R pic.twitter.com/FIuJQvbSqI
— S.Suresh Kumar, Minister – Govt of Karnataka (@nimmasuresh) August 11, 2020
ವಿದ್ಯಾರ್ಥಿಯ ಬಗ್ಗೆ ’ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಕರ್ತೆ ಅಶ್ವಿನಿ ಎಮ್ ಶ್ರೀಪಾದ್ ಟ್ವಿಟ್ಟರಿನಲ್ಲಿ ಶಿಕ್ಷಣ ಸಚಿವರಿಗೆ ಮಾಹಿತಿ ನೀಡಿದ್ದರು. ಅದಕ್ಕೆ ಉತ್ತರಿಸಿದ್ದ ಸಚಿವ ಸುರೇಶ್ ಕುಮಾರ್ ನಾನು ಅವರಿಗೆ ಕರೆ ಮಾಡಿ ಮಾತನಾಡಿ ಅಭಿನಂಧನೆ ಸಲ್ಲಿಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
Mahesh, who studied at Govt school in #Bengaluru was also working as construction labour took a break from work only 5 days before SSLC exams , he scored 616/625. What his success mantra? “I worked more on difficult lessons@nimmasuresh@santwana99https://t.co/LqYtGgfqYf
— Ashwini M Sripad (@AshwiniMS_TNIE) August 11, 2020
ಸಚಿವರು ವಿದ್ಯಾರ್ಥಿಯನ್ನು ಭೇಟಿ ಮಾಡಿ ಅವರಿಗೆ ಅಭಿನಂಧನೆ ಸಲ್ಲಿಸಿ, ಮುಂದಿನ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ ಎಂದು ಹೇಳಿದ್ದಾರೆ.
ಓದಿ: ಎಸ್ಸೆಸ್ಸೆಲ್ಸಿ ಪರೀಕ್ಷೆ: ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಬವಣೆಗಳು


