Homeಕರೋನಾ ತಲ್ಲಣಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ!

ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ!

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನಾ ಸಮಾರಂಭದಲ್ಲಿ ಗೋಪಾಲ್ ದಾಸ್ ಪ್ರಧಾನಿ ಸೇರಿದಂತೆ ಹಲವಾರು ಜನರೊಂದಿಗೆ ವೇಧಿಕೆ ಹಂಚಿಕೊಂಡಿದ್ದರು.

- Advertisement -
- Advertisement -

ರಾಮ ಮಂದಿರದ ಟ್ರಸ್ಟ್‌‌ನ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ (80) ಅವರಿಗೆ ಗುರುವಾರ ಕೊರೊನಾ ದೃಢಪಟ್ಟಿದ್ದು, ಅವರನ್ನು ಗುರಗಾಂವ್‌ನ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭದಲ್ಲಿ ಗೋಪಾಲ್ ದಾಸ್, ಪ್ರಧಾನಿ ನರೇಂದ್ರ ಮೋದಿ, ಆದಿತ್ಯನಾಥ್, ಉತ್ತರ ಪ್ರದೇಶದ ಗವರ್ನರ್ ಆನಂದಿ ಬೆನ್ ಪಟೇಲ್ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದರು.

ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಯ ಮೇರೆಗೆ ದಾಸ್ ಅವರನ್ನು ಗುರಗಾಂವ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಗೋಪಾಲ್ ದಾಸ್ ಅವರೊಂದಿಗೆ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಮಥುರಾ ಜಿಲ್ಲಾಧಿಕಾರಿ (ಡಿಎಂ) ಸರ್ವಗ್ಯ ರಾಮ್ ಮಿಶ್ರಾ ಹೇಳಿದರು.

ಶ್ರೀ ಕೃಷ್ಣ ಜನ್ಮಭೂಮಿ ನ್ಯಾಯಾಸ್ ಅಧ್ಯಕ್ಷರೂ ಆಗಿರುವ ಗೋಪಾಲ್ ದಾಸ್ ನಸುಕಿನ 1.30 ರವರೆಗೆ ಮಥುರಾದ ಶ್ರೀ ಕೃಷ್ಣ ಜನ್ಮಸ್ಥಾನದಲ್ಲಿದ್ದರು. ಅವರು ಭಗವತ್ ಭವನದಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 1 ರವರೆಗೆ ದೇವತೆಯ “ಅಭಿಷೇಕ್” ಪ್ರದರ್ಶನ ನೀಡಿದ್ದರು ಎಂದು ಶ್ರೀ ಕೃಷ್ಣ ಜನ್ಮಸ್ಥಾನ್ ಸೇವಾ ಸಂಸ್ಥೆಯ ಸದಸ್ಯ ಗೋಪೇಶ್ವರ ನಾಥ್ ಚತುರ್ವೇದಿ ಹೇಳಿದರು. ಅಲ್ಲಿಯವರೆಗೆ ಅವರು ತಮ್ಮ ಆರೋಗ್ಯದ ಬಗ್ಗೆ ದೂರು ನೀಡಿರಲಿಲ್ಲ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಅಯೋಧ್ಯೆ ಕಾರ್ಯಕ್ರಮ ಬೇಕೆ?; ಬಂಗಾಳಿ ವಿದ್ಯಾರ್ಥಿಗೆ ಥಳಿತ

ರಾಮಮಂದಿರ ಭೂಮಿ ಪೂಜೆ ಮಾಡುವ ಅರ್ಚಕನಿಗೆ ಕೊರೊನಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...