Homeಕರ್ನಾಟಕವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿಯವರು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಮೂರು ದಿನದ ಹಿಂದೆ ಹೇಳಿದ್ದರು.

- Advertisement -
- Advertisement -

ನಿಮ್ಮ ಮೇಲಿನ ಎಲ್ಲಾ ಕೇಸುಗಳನ್ನು ತೆಗೆದುಹಾಕುತ್ತೇವೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಇಂದು ವಿಎಚ್‌ಪಿ ಮುಖಂಡರ ಮೇಲಿನ ಕೇಸುಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದಾರೆ.


ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು! 


ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದರು. ಅದರ ವಿಡಿಯೋ ಕೆಳಗಿದೆ.

ಆ ವಿವಾದಾತ್ಮಕ ವಿಡಿಯೋವೊಂದನ್ನು ಗೃಹ ಸಚಿವರಿಗೆ ಮನವಿ ಕೊಟ್ಟಿದ್ದ ಅದೇ ಆರೋಪಿ ಶರಣ್ ಪಂಪ್‌ವೆಲ್ ಅಕಸ್ಮಾತ್ತಾಗಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿತ್ತು.

ನಾನುಗೌರಿ.ಕಾಂ ಈ ವಿಷಯವನ್ನು ಬಯಲಿಗೆಳೆದು ವಿಸೃತ ವರದಿ ಮಾಡಿದ ನಂತರ ಶರಣ್‌ ಪಂಪ್‌ವೆಲ್‌ ಆ ಟ್ವೀಟ್‌ ಅನ್ನು ಡಿಲಿಟ್‌ ಮಾಡಿದ್ದಾರೆ. (ಆದರೆ ಅದರಲ್ಲಿದ್ದ ವಿಡಿಯೋದ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ಕಿಸಿ)

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಕೈಬಿಟ್ಟ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸದಾ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿಯವರ ಈ ಹೇಳಿಕೆ ಖಂಡಿಸಿ ಅವರು ರಾಜಿನಾಮೆ ನೀಡುವಂತೆ ಆಗ್ರಹಿಸಿ ಟ್ವಿಟ್ಟರ್‌ನಲ್ಲಿ #ResignBSBommai ಟ್ರಂಡ್ ಆಗಿತ್ತು.

“ಅತ್ಯಂತ ಸಮರ್ಥ ಗೃಹಸಚಿವರುಗಳನ್ನು ಕಂಡ ಕರ್ನಾಟಕ ರಾಜ್ಯಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಗೃಹ ಸಚಿವರು ಸಿಕ್ಕಿರುವುದು ದುರಾದೃಷ್ಟಕರ. ತಕ್ಷಣ ರಾಜೀನಾಮೆ ನೀಡಿ” ಎಂದು ಹಲವರು ಆಗ್ರಹಿಸಿದ್ದರು.


ಇದನ್ನೂ ಓದಿ: #ResignBSBommai; ರಾಜ್ಯ ಗೃಹಸಚಿವರು ರಾಜಿನಾಮೆ ನೀಡುವಂತೆ ಟ್ವಿಟ್ಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...