Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...