Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...