Homeಮುಖಪುಟಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಮೋದಿಗೆ ಚೀನಾದ ಹೆಸರು ಉಚ್ಚರಿಸಲು ಭಯ: ರಣದೀಪ್ ಸುರ್ಜೇವಾಲ

ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ.

- Advertisement -
- Advertisement -

ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಚೀನಾವನ್ನು ಹೆಸರಿಸದ ಟೀಕಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವ ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಜನರಿಗೆ ತಿಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಸರ್ಕಾರದ ‘ಆತ್ಮನಿರ್ಭರ್ (ಸ್ವಾವಲಂಬಿ)’ ಘೋಷಣೆಯನ್ನು ಟೀಕಿಸುತ್ತಾ, 32 ಸಾರ್ವಜನಿಕ ವಲಯದ ಉದ್ಯಮಗಳನ್ನು ಮಾರಾಟ ಮಾಡಿ, ರೈಲ್ವೆ ಮತ್ತು ವಿಮಾನ ನಿಲ್ದಾಣಗಳನ್ನು ಖಾಸಗಿ ಕೈಗಳಿಗೆ ಹಸ್ತಾಂತರಿಸಿ, ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾ (ಎಫ್‌ಸಿಐ), ಜೀವ ವಿಮಾ ನಿಗಮದ (ಎಲ್‌ಐಸಿ) ಮೇಲೆ ದಾಳಿ ಮಾಡಿದಾಗ ದೇಶದ ಸ್ವಾತಂತ್ರ್ಯವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 130 ಕೋಟಿ ಭಾರತೀಯರು ನಮ್ಮ ಸಶಸ್ತ್ರ, ಅರೆಸೈನಿಕ ಮತ್ತು ಪೊಲೀಸ್ ಪಡೆಗಳ ಬಗ್ಗೆ  ಹೆಮ್ಮೆಪಡುತ್ತೇವೆ. ನಮ್ಮ ಮೇಲೆ ದಾಳಿ ನಡೆದಾಗಲೆಲ್ಲಾ ದಾಳಿಕೋರರನ್ನು ಅವರ ಹೆಸರಿಡಿದು ತೀವ್ರವಾಗಿ ಟೀಕಿಸಿದ್ದೇವೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

“ಆದರೆ ನಮ್ಮ ಆಡಳಿತಗಾರರು ಚೀನಾದ ಹೆಸರನ್ನು ಉಚ್ಚರಿಸಲು ಏಕೆ ಹೆದರುತ್ತಾರೆ ಎಂಬುದರ ಬಗ್ಗೆಯೂ ನಾವು ಯೋಚಿಸಬೇಕು. ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡಾಗ, ಚೀನಾದ ಪಡೆಗಳನ್ನು ಹಿಂದಕ್ಕೆ ಕಳುಹಿಸಲು ಮತ್ತು ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಹೇಗೆ ಕ್ರಮವಹಿಸುತ್ತದೆ ಎಂದು ನಾವು ಸರ್ಕಾರವನ್ನು ಕೇಳಬೇಕು” ಎಂದು ಅವರು ಹೇಳಿದರು.

ಕೆಂಪು ಕೋಟೆಯ ವೇದಿಕೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಚೀನಾ ಮತ್ತು ಪಾಕಿಸ್ತಾನಕ್ಕೆ ತೀಕ್ಷ್ಣವಾದ ಸಂದೇಶವನ್ನು ನೀಡಿದರು. ಉಭಯ ದೇಶಗಳ ಗಡಿಯುದ್ದಕ್ಕೂ ನಿಯೋಜಿಸಲಾಗಿರುವ ಸಶಸ್ತ್ರ ಪಡೆಗಳು ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಲು ಯತ್ನಿಸಿದವರಿಗೆ ಸೂಕ್ತವಾದ ಉತ್ತರವನ್ನು ನೀಡಿವೆ ಎಂದು ಘೋಷಿಸಿದರು. ಆದರೆ, ಅವರು ಉಭಯ ದೇಶಗಳ ಹೆಸರನ್ನು ಸೂಚಿಸಲಿಲ್ಲ.

ತಮ್ಮ 90 ನಿಮಿಷಗಳ ಭಾಷಣದಲ್ಲಿ ಪ್ರಧಾನಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಅಭಿಯಾನದ ಬಗ್ಗೆ ವ್ಯಾಪಕವಾಗಿ ಮಾತನಾಡಿದರು. “ಆತ್ಮನಿರ್ಭರ್” ಬಗ್ಗೆ ಮಾತನಾಡುವವರು, ಅದರ ಅಡಿಪಾಯವನ್ನು ಪಂಡಿತ್ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಹಾಕಿದ್ದಾರೆ ಎಂಬುದನ್ನು ಮರೆತಿದ್ದಾರೆ ಎಂದು ಸುರ್ಜೇವಾಲ ಹೇಳಿದ್ದಾರೆ.

“ಇಂದು, ಇಂತಹ ಸ್ವಾತಂತ್ರ್ಯದ ಮೇಲೆ ಆಕ್ರಮಣ ಮಾಡುವವರ ವಿರುದ್ಧ ನಿರ್ಣಾಯಕ ಯುದ್ಧವನ್ನು ಧ್ವನಿಸುವ ಪ್ರತಿಜ್ಞೆಯನ್ನು ನಾವೆಲ್ಲರೂ ತೆಗೆದುಕೊಳ್ಳಬೇಕು. ಇದು ನಿಜವಾದ ರಾಷ್ಟ್ರೀಯತೆಯಾಗಿರುತ್ತದೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...