Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...