Homeಕರ್ನಾಟಕಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ!

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಹಲವು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನವೇ ಅವರ ಪ್ರತಿಮೆಗೆ ಅವಮಾನ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರವು ಕನ್ನಡಿಗರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಅನುಮತಿ ಪಡೆದಿದ್ದೇವೆ

ಪೊಲೀಸರು ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಕಾನೂನುಬಾಹಿರ ಎಂದು ವಾದಿಸಿದರೆ ಹಲವು ಕನ್ನಡ ಹೋರಾಟಗಾರರು, ಹಿಂದಿನ ಸರ್ಕಾರವಿದ್ದಾಗಲೇ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದೇವೆ ಮತ್ತು ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದಿದ್ದೇವೆ ಎಂದು ವಾದಿಸಿದ್ದಾರೆ.

ಈಶ್ವರಪ್ಪ ಎಲ್ಲಿದ್ದಾರೆ?

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುವು ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಕೆ.ಎಸ್ ಈಶ್ವರಪ್ಪನವರು ಈಗ ಎಲ್ಲಿದ್ದಾರೆ ಎಂದು ಹಲವು ನೆಟ್ಟಿಗರು ಪ್ರಶ್ನಿಸಿದ್ದಾರೆ. ಇತ್ತ ಸಂಗೊಳ್ಳಿ ರಾಯಣ್ಣನವರಿಗೆ ಬಿಜೆಪಿಯವರಿಂದಲೇ ಅವಮಾನವಾಗುತ್ತಿದ್ದು ತಿರುಗಿ ನೋಡದ ಈಶ್ವರಪ್ಪನವರಿಗೆ ರಾಯಣ್ಣರ ಮೇಲೆ ಪ್ರೀತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಯಣ್ಣನ ಹೆಸರಲ್ಲಿ ಬ್ರಿಗೇಡಗಳನ್ನ ಕಟ್ಟಿಕೊಳ್ಳೊದೇನು, ನಿನ್ನ ಪತ್ರಿಕೆಗಳಲ್ಲಿ ರಾಯಣ್ಣನ ಕುರಿತು ಬರೆದಿದ್ದೇನು! ರಾಯಣ್ಣನನ್ನು ರಾಜಕೀಯಕ್ಕೆ ಬಳಸಿಕೊಳ್ಳೋದು. ಪುತ್ಥಳಿಯನ್ನು ಹಿಂದಿನಿಂದ ತೆಗೆಸೋದು. ಕನ್ನಡಿಗರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಗೊಳ್ಳಿ ರಾಯಣ್ಣ ಬೇಡ: ಸಾವರ್ಕರ್ ಬೇಕು – ಇದು ಬಿಜೆಪಿ ನೀತಿ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕನ್ನಡಿಗರ ಹೆಮ್ಮಯ ರಾಯಣ್ಣನ ಪ್ರತಿಮೆ ತೆರವು ಗೊಳಿಸಿದ ಸರ್ಕಾರ. ಬೆಂಗಳೂರಿನಲ್ಲಿ ಮರಾಠಿ ಸಾವರ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ ಸರ್ಕಾರ. ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರವಿದೆಯೋ ಅಥವಾ ನಾಗಪುರದ ಸರ್ಕಾರವಿದೆಯೋ? ಇದು ರಾಯಣ್ಣನ ಜನ್ಮದಿನದಂದೆ ಕನ್ನಡಿಗರಿಂದ ಕನ್ನಡಿಗ ರಾಯಣ್ಣನಿಗೆ ಮಾಡಿದ ಅವಮಾನ ಎಂದು ಪ್ರತಾಪ್ ಕಣಗಲ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ ಎಂದು ಗದ್ದಪ್ಪ ಎಂಬುವವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನೆಗೆ ಕರೆ

ಈ ಸರ್ಕಾರಕ್ಕೆ ಮರಾಠಿಗ ಸಾವರ್ಕರ್ ಬೇಕು. ಕೆಚ್ಚೆದೆಯ ಕನ್ನಡಿಗ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಬೇಕಾಗಿಲ್ಲ….! ನಾಡ ಅಭಿಮಾನಿಗಳೇ ಬನ್ನಿ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ. ಬೆಳಗ್ಗೆ -11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ಮುಂಭಾಗ ಪ್ರತಿಭಟನೆ ನಡೆಸೋಣ ಎಂದು ಕನ್ನಡ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್‌ರವರು ಕರೆನೀಡಿದ್ದಾರೆ.

ಬೆಳಗಾವಿಯ ಪೀರನವಾಡಿಯಲ್ಲಿ ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ಅವಕಾಶ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ, ಈ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಕೂಡಲೇ ಸರ್ಕಾರ ಎಚ್ಚೆತ್ತು ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಪಕ್ಷ ಘೋಷಿಸಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ.‌ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ‌ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...