Homeಮುಖಪುಟಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ...

ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ದ್ವಿವೇದಿ ತಮ್ಮ ಪ್ರಶ್ನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಷ್ಟು ಬ್ರಾಹ್ಮಣರನ್ನು ಕೊಲ್ಲಲಾಗಿದೆ ಮತ್ತು ಈ ಅವಧಿಯಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಎಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಶಿಕ್ಷೆಗೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಯಬೇಕೆಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನಪುರದ ಬಿಜೆಪಿ ಶಾಸಕ ದೇವ್ಮಣಿ ದ್ವಿವೇದಿ ಕಳೆದ ಮೂರು ವರ್ಷಗಳಲ್ಲಿ ಕೊಲ್ಲಲ್ಪಟ್ಟ ಬ್ರಾಹ್ಮಣರ ಸಂಖ್ಯೆಗೆ ಸಂಬಂಧಿಸಿ, ಮುಂಬರುವ ವಿಧಾನಸಭಾ ಅಧಿವೇಶನಕ್ಕೆ ಪ್ರಶ್ನೆ ಹಾಕುವ ಮೂಲಕ ತಮ್ಮದೇ ಪಕ್ಷವನ್ನು, ಸರ್ಕಾರವ್ನನ್ಉ ಮುಜುಗರಕ್ಕೀಡು ಮಾಡಿದ್ದಾರೆ.

ಶಾಸಕರು ತಮ್ಮ ‘ಅಲ್ಪಸೂಚಿತ’ (ಅಲ್ಪಾವಧಿಯ) ಪ್ರಶ್ನೆಯನ್ನು ವಿಧಾನಸಭಾ ಸಚಿವಾಲಯಕ್ಕೆ ಭಾನುವಾರ ಸಲ್ಲಿಸಿದರು. ಅಸೆಂಬ್ಲಿ ಅಧಿವೇಶನವು ಆಗಸ್ಟ್ 20 ರಂದು ಪ್ರಾರಂಭವಾಗಲಿದೆ ಎನ್ನಲಾಗಿತ್ತು ಆದರೆ ಕಾರಣಾತರಗಳಿಂದ ಆಗಸ್ಟ್ 21 ಕ್ಕೆ ಮುಂದೂಡಲ್ಪಟ್ಟಿತ್ತು.

ದ್ವಿವೇದಿ ತಮ್ಮ ಪ್ರಶ್ನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಷ್ಟು ಬ್ರಾಹ್ಮಣರನ್ನು ಕೊಲ್ಲಲಾಗಿದೆ ಮತ್ತು ಈ ಅವಧಿಯಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಎಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಶಿಕ್ಷೆಗೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಯಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಬ್ರಾಹ್ಮಣರಿಗೆ ಭದ್ರತೆ ಒದಗಿಸುವ ಯೋಜನೆಯನ್ನು ರೂಪಿಸಿದೆಯೆ? ಹಾಗೂ ಬ್ರಾಹ್ಮಣರಿಗೆ ಆದ್ಯತೆಯ ಆಧಾರದ ಮೇಲೆ ಶಸ್ತ್ರಾಸ್ತ್ರ ಪರವಾನಗಿಗಳನ್ನು ನೀಡುತ್ತದೆಯೇ ಎಂದು ತಿಳಿಯಲು ಶಾಸಕರು ಒತ್ತಾಯಿಸಿದ್ದಾರೆ.

ಶಸ್ತ್ರಾಸ್ತ್ರ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ ಬ್ರಾಹ್ಮಣರ ಸಂಖ್ಯೆ ಮತ್ತು ಅವರಲ್ಲಿ ಎಷ್ಟು ಜನರಿಗೆ  ಪರವಾನಗಿ ನೀಡಲಾಗಿದೆ ಎಂಬ ಬಗ್ಗೆಯೂ ಅವರು ಸರ್ಕಾರವನ್ನು ಕೇಳಿದ್ದಾರೆ.

ಶಾಸಕಾಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರು ಈ ರೀತಿ ಜಾತಿ ಆಧಾರಿತವಗಿ ಪ್ರಶ್ನೆಯನ್ನು ಕೇಳಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಸಲ್ಲಿಸಲಾದ ಶಾಸಕರ ಪ್ರಶ್ನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಪ್ರತಿಪಕ್ಷಗಳು ದಾಳಿ ನಡೆಸಿದ್ದಾರೆ.


ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....