Homeಅಂತರಾಷ್ಟ್ರೀಯಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

- Advertisement -
- Advertisement -

ಫೇಸ್‌ಬುಕ್‌ನ ಭಾರತದ ಕಾರ್ಯನಿರ್ವಾಹಕಿ ಅಂಖಿ ದಾಸ್ ಮತ್ತು ಬಿಜೆಪಿ ಪ್ರೇಮದ ಕುರಿತು ಪ್ರಶ್ನೆಗಳೆದ್ದಿರುವ ಸಮಯದಲ್ಲಿ ಭಾರತದಲ್ಲಿ ಎದ್ದ ರಾಜಕೀಯ ವಿಷಯವನ್ನು ಫೇಸ್‌‌ಬುಕ್‌ ಹೇಗೆ ನಿಯಂತ್ರಿಸುತ್ತದೆ ಎಂಬ ಬಗ್ಗೆ ಅದರ ನೌಕರರು ಪ್ರಶ್ನೆ ಮಾಡಿದ್ದಾರೆ.

ಮುಸ್ಲಿಮರನ್ನು ದೇಶದ್ರೋಹಿಗಳು ಎಂದು ಕರೆದ ಬಿಜೆಪಿಯ ರಾಜಕಾರಣಿಯ ಪೋಸ್ಟ್‌‌ಗಳಿಗೆ ಕಂಪನಿಯ ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸುವುದನ್ನು ದಾಸ್ ವಿರೋಧಿಸಿದ್ದಾರೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ನಂತರ ವಿಶ್ವದ ಅತಿದೊಡ್ಡ ಸಾಮಾಜಿಕ ನೆಟ್‌ವರ್ಕ್ ಆದ ಫೇಸ್‌ಬುಕ್‌ ಭಾರತದಲ್ಲಿ ತೀವ್ರ ಟೀಕೆ ಎದುರಿಸುತ್ತಿದೆ.

ಫೇಸ್‌ಬುಕ್‌ ಈ ರೀತಿ ಒಂದು ಪಕ್ಷದ ಪರವಿರುವುದು ಸರಿಯೇ ಎಂದು ಅದರ ಉದ್ಯೋಗಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

11 ಫೇಸ್‌ಬುಕ್ ಉದ್ಯೋಗಿಗಳು ಫೇಸ್‌ಬುಕ್‌ನ ಆಂತರಿಕ ವೇದಿಕೆಯೊಂದರಲ್ಲಿ ನಾಯಕತ್ವಕ್ಕೆ ಪತ್ರ ಬರೆದಿದ್ದು, ‘ಫೇಸ್‌ಬುಕ್‌ ನಾಯಕತ್ವವು ಮುಸ್ಲಿಂ ವಿರೋಧಿ ಧರ್ಮಾಂಧತೆಯನ್ನು ಖಂಡಿಸಬೇಕು ಮತ್ತು ಹೆಚ್ಚಿನ ನೀತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಭಾರತದಲ್ಲಿ ಮತ್ತು ಇತರೆಡೆ ನೀತಿ ನಿರೂಪಣಾ ತಂಡವು ವೈವಿಧ್ಯಮಯ ಪ್ರಾತಿನಿಧ್ಯವನ್ನು (ಹಲವು ಜಾತಿ, ಧರ್ಮ, ಲಿಂಗ, ಪ್ರದೇಶಗಳ ಅಧಿಕಾರಿಗಳನ್ನು) ಒಳಗೊಂಡಿರಬೇಕು” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

“ನಾವು ಇದರಲ್ಲಿ ಒಬ್ಬಂಟಿಯಾಗಿಲ್ಲ ಎಂದು ನಮಗೆ ತಿಳಿದಿದೆ. ಕಂಪನಿಯಾದ್ಯಂತದ ಉದ್ಯೋಗಿಗಳು ಇದೇ ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ. “ಫೇಸ್‌ಬುಕ್‌ನಲ್ಲಿರುವ ಮುಸ್ಲಿಂ ಸಮುದಾಯವು ನಮ್ಮ ಪ್ರಶ್ನೆಗಳನ್ನು ಫೇಸ್‌ಬುಕ್ ನಾಯಕತ್ವದಿಂದ ಕೇಳಲು ಬಯಸುತ್ತದೆ.” ಎಂದು ಪತ್ರ ಉಲ್ಲೇಖಿಸಿದೆ. ಈ ಬಗ್ಗೆ ಫೇಸ್‌ಬುಕ್ ಮತ್ತು ಅಂಖಿ ದಾಸ್ ತಕ್ಷಣ ಸ್ಪಂದಿಸಿಲ್ಲ ಎಂದು ದಿ ವೈರ್ ಪತ್ರಿಕೆ‌ ಹೇಳಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ನಕಲಿ ಸುದ್ದಿ, ಪ್ರಭುತ್ವ ಬೆಂಬಲಿತ ತಪ್ಪು ಮಾಹಿತಿ ಅಭಿಯಾನಗಳು ಮತ್ತು ಹಿಂಸಾತ್ಮಕ ವಿಷಯಗಳನ್ನು ಹರಡುವ ವಿಷಯದಲ್ಲಿ ಫೇಸ್‌ಬುಕ್‌ ಇತ್ತೀಚಿನ ವರ್ಷಗಳಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ನರೇಂದ್ರೆ ಮೋದಿಯ ಪಕ್ಷವಾದ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಗೆ ಹತ್ತಿರವಿರುವ ರಾಜಕಾರಣಿಗಳಿಗೆ ದ್ವೇಷ-ಭಾಷಣ ನಿಯಮಗಳನ್ನು ಅನ್ವಯ ಮಾಡಿದರೆ “ದೇಶದಲ್ಲಿ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾಳುಮಾಡುತ್ತದೆ” ಎಂದು ಅಂಖಿ ದಾಸ್ ಸಿಬ್ಬಂದಿಗೆ ತಿಳಿಸಿದ್ದಾರೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ಲೇಖನ ಹೇಳಿತ್ತು.

ಈ ವರದಿಯ ನಂತರ ಫೇಸ್‌ಬುಕ್ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ಹಿಂಸಾಚಾರವನ್ನು ಪ್ರಚೋದಿಸುವ ಪೋಸ್ಟ್‌ಗಳ ವಿರುದ್ದ ನೀತಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದೆ.

“ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದೇವೆ ಮತ್ತು ನಿಯಮಿತವಾಗಿ ಇದರ ಬಗ್ಗೆ ಲೆಕ್ಕಪರಿಶೋಧನೆಯನ್ನು ನಡೆಸುತ್ತಿದ್ದೇವೆ” ಎಂದು ಭಾರತದಲ್ಲಿ 30 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್‌ಬುಕ್ ಹೇಳಿದೆ. ನಿಜವಾಗಿಯೂ ಏನಾಯಿತು ಎಂಬುದರ ಕುರಿತು ಪರಿಶೀಲನೆ ನಡೆಯುತ್ತದೆ ಎಂದು ಹೇಳಲಾಗಿದೆ.


ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...