Homeಮುಖಪುಟನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

"ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ" ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು "ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್" ಎಂದು ಹೇಳುವ ಮೂಲಕ ತಡೆದರು.

- Advertisement -
- Advertisement -

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದ ಸುಪ್ರೀಂನಲ್ಲಿ ಇಂದು ಶಿಕ್ಷೆ ಘೋಷಿಸುವ ವಿಚಾರಣೆಯ ಹಲವು ಗಂಟೆಗಳ ಕಾಲ ನಡೆಯಿತು. ಶಿಕ್ಷೆ ಘೋಷಿಸುವ ವಿಚಾರಣೆಯನ್ನು ಮುಂದೂಡಲು ನಿರಾಕರಿಸಿದ ಸುಪ್ರೀಂ, ಪ್ರಶಾಂತ್ ಭೂಷಣ್ ತಮ್ಮ ಹೇಳಿಕೆ ಸಲ್ಲಿಸಲು ಅವಕಾಶ ನೀಡಿತು.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಪ್ರಶಾಂತ್ ಭೂಷಣ್ ಹೇಳಿದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ‘ಶಿಕ್ಷೆ ವಿಧಿಸಬಾರದು’ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿಯವರು “ನೀವು ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ?” ಎಂದು ಪ್ರಶಾಂತ್ ಭೂಷಣ್‌ರವರಗೆ ಪ್ರಶ್ನಿಸಿ 2-3 ದಿನ ಸಮಯ ನೀಡುವುದಾಗಿ ಹೇಳಿದರು.

ಇದಕ್ಕೆ ಉತ್ತರಿಸಿದ ಪ್ರಶಾಂತ್ ಭೂಷಣ್‌ರವರು “ಬಹಳಷ್ಟು ಯೋಚಿಸಿ ನನ್ನ ಹೇಳಿಕೆ ನೀಡಿದ್ದೇನೆ. ಅದನ್ನು ಮರಪರಿಶೀಲಿಸುವ ಪ್ರಶ್ನೆಯಿಲ್ಲ. ನೀವು ನನಗೆ ನನ್ನ ಹೇಳಿಕೆ ಬದಲಿಸಲು ಸಮಯ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ” ಎಂದಿದ್ದಾರೆ.

ಪ್ರಶಾಂತ್ ಭೂಷಣ್‌ ತಮ್ಮ ಹೇಳಿಕೆಯನ್ನು ಮರುಪರಿಶೀಲಿಸದ ಹೊರತು ಅವರನ್ನು ಶಿಕ್ಷಿಸಬೇಡಿ ಎಂಬ ನಿಮ್ಮ ಮನವಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್‌ರವರಿಗೆ ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

ಪ್ರಶಾಂತ್ ಭೂಷಣ್‌ರವರ ಟ್ವೀಟ್‌ಗಳು ನ್ಯಾಯಾಲಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿವೆ ಎಂದು ಸಾಕ್ಷಿ ಸಮೇತ ನ್ಯಾಯಾಲಯವು ವಿವರಿಸದಿದ್ದರೆ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 13ರ ಉದ್ದೇಶಗಳಿಗೆ ಸೋಲುಂಟಾಗುತ್ತದೆ ಎಂದು ಡಾ.ರಾಜೀವ್ ಧವನ್ ವಾದ ಮಂಡಿಸಿದರು.

ನಾವು ಶಿಕ್ಷೆ ಪ್ರಮಾಣದ ವಿಚಾರಣೆ ನಡೆಸುವಾಗ ವ್ಯಕ್ತಿಯು ತಾನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳಬೇಕು, ಅದು ಅವರ ಮನದಾಳದಿಂದ ಬರಬೇಕು ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಪ್ರಶಾಂತ್ ಭೂಷಣ್‌ರವರ ಹೇಳಿಕೆಯು ನ್ಯಾಯಮೂರ್ತಿಗಳಾದ ಲೋಧಾ, ಎ.ಪಿ ಶಾ, ಮದನ್ ಲೋಕುರ್ ಮತ್ತು ಜೋಸೆಫ್‌ರವರ ಹೇಳಿಕೆಗಳನ್ನು ಪ್ರತಿಧ್ವನಿಸಿದೆ. ಹಾಗೆಂದು ಅವರ ವಿಚಾರಣೆಗಳನ್ನು ತಪ್ಪೆನ್ನಲು ಸಾಧ್ಯವೇ? ಎಂದು ಧವನ್ ವಾದಿಸಿದರು ಅದನ್ನು ನ್ಯಾಯಮೂರ್ತಿ ಮಿಶ್ರಾ ತಡೆದರು.

“ಉನ್ನತ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿರುವ 9 ನ್ಯಾಯಾಧೀಶರ ಪಟ್ಟಿ ನನ್ನ ಬಳಿ ಇದೆ. 1987ರಲ್ಲಿ ನಾನು ಕೂಡ ಹೇಳಿದ್ದೆ” ಎಂದು ಅಟಾರ್ನಿ ಜನರಲ್ ಹೇಳುತ್ತಿರುವಾಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಮಿಶ್ರಾರವರು “ಅದನ್ನೆಲ್ಲ ಕೇಳಲು ನಾವು ಇಲ್ಲಿ ಕೂತಿಲ್ಲ  ಸರ್” ಎಂದು ಹೇಳುವ ಮೂಲಕ ತಡೆದರು.

ಡಾ. ಧವನ್‌ರವರು ತಮ್ಮ ವಾದವನ್ನು ಮುಗಿಸಿದ್ದಾರೆ. ಸದ್ಯದಲ್ಲಿಯೇ ಸುಪ್ರೀಂ ತೀರ್ಪು ಪ್ರಕಟಿಸಲಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಶಾಂತ ಬೂಶಣ್ ಅವರಂತಹ ದೀರ ವ್ಯಕ್ತಿಗಳು ಈ ದೇಶಕ್ಕಿಂದು ಅತ್ಯಗತ್ಯವಾಗಿ ಬೇಕಾಗಿದ್ದಾರೆ.

  2. Dear Prashantaji,
    I appreciate your courage and conviction. I hope lot of people like you ( including me ) would rise up in the society to fight against injustice and lowering of democratic values. Long live PRASHANTAJI.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...