Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...