ಕರ್ನಾಟಕದ ಸಿಂಗಂ ಎಂದು ಕರೆಸಿಕೊಂಡಿದ್ದ ಕರ್ನಾಟಕ ಕೇಡರ್‌ನ ನಿವೃತ್ತ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಲಿದ್ದಾರೆ.
ಇಂದು ಮಧ್ಯಾಹ್ನ ಒಂದು ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅವರು ಬಿಜೆಪಿ ಪಕ್ಷ ಸೇರಲಿದ್ದು, ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ಅಣ್ಣಾಮಲೈಯವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಫಲವಾಗಿದೆ.
ಅಣ್ಣಾಮಲೈರವರು ಕರ್ನಾಟಕದಲ್ಲಿ ಬೆಂಗಳೂರು, ಚಿಕ್ಕಮಗಳೂರು ಸೇರಿ ಹಲವೆಡೆ ಡಿಸಿಪಿ, ಎಸ್‌ಪಿಯಾಗಿ ಕಾರ್ಯನಿರ್ವಹಿಸಿ 2019ರ ಮೇ ತಿಂಗಳಿನಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ನಿವೃತ್ತಿ ನಂತರ ಕರೂರ್ ಮತ್ತು ಕೊಯಂಬತ್ತೂರಿನಲ್ಲಿ ಕೃಷಿಕರೊಂದಿಗೆ ಕೆಲಸ ಮಾಡುತ್ತಿದ್ದಾರೆ.
ಅಣ್ಣಾಮಲೈರವರು ನಿವೃತ್ತಿ ಘೋಷಿಸಿದಾಗಲೇ ಸಿಂಗಂ ಬಿಜೆಪಿ ಸೇರುತ್ತಾರೆ ಎಂದು ಹಲವರು ಊಹಿಸಿದ್ದರು. ಇನ್ನು ಕೆಲವರು ಅವರು ಬಿಜೆಪಿ ಸೇರುವುದಕ್ಕಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ಟೀಕಿಸಿದ್ದರು. ಆದರೆ ಆಗ ಅದನ್ನು ನಿರಾಕರಿಸಿದ್ದ ಅವರು, ಕೊನೆಗೂ ಬಿಜೆಪಿ ಸೇರುವ ಮೂಲಕ ತಮ್ಮ ಟೀಕಾಕಾರರ ಊಹೆಯನ್ನು ನಿಜ ಮಾಡಿದ್ದಾರೆ.
ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ. pic.twitter.com/iDqL3SEoaf— Dr Sudhakar K (@mla_sudhakar) August 25, 2020
ಬಿಜೆಪಿ ಸೇರುತ್ತಿರುವ ಅಣ್ಣಾಮಲೈಗೆ ಸಚಿವ ಡಾ.ಸುಧಾಕರ್ ಸೇರಿ ಹಲವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ಅಣ್ಣಾಮಲೈ ಬಿಜೆಪಿ ಸೇರ್ಪಡೆ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ


