Homeಮುಖಪುಟಸೋನಿಯಾ ಗಾಂಧಿ ನೇತೃತ್ವದಲ್ಲಿ ಹಲವು ಸಿಎಂಗಳ ಜೊತೆ NEET, JEE ಕುರಿತು ಸಭೆ

ಸೋನಿಯಾ ಗಾಂಧಿ ನೇತೃತ್ವದಲ್ಲಿ ಹಲವು ಸಿಎಂಗಳ ಜೊತೆ NEET, JEE ಕುರಿತು ಸಭೆ

ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌, ನಟ ಸೋನು ಸೂದ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕೊರೊನಾ ಸಂಕಷ್ಟದ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶ ಪರೀಕ್ಷೆ NEET ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪರೀಕ್ಷೆ JEE ಯನ್ನು ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಸೇರಿ ಹಲವು ಮಂದಿ ಆಗ್ರಹಿಸಿದ್ದರು. ಆದರೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾತ್ರ ಪರೀಕ್ಷೆ ನಡೆಸಿಯೇ ಸಿದ್ದ ಎಂದು ಘಂಟಾಘೋಷವಾಗಿ ತಿಳಿಸಿದೆ.

ಪಕ್ಷದಲ್ಲಿ ಉಂಟಾದ ಭಿನ್ನಮತದ ಕಾವಿನಿಂದ ಹೊರ ಬಂದಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಸೇರಿ  ಇಂದು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯಗಳ ಹಣಕಾಸು ಸ್ಥಿತಿಗತಿ ಜೊತೆಗೆ ನೀಟ್, ಜೆಇಇ ಮತ್ತು ಜಿಎಸ್‌ಟಿ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರಭಲ ಹೋರಾಟಕ್ಕೆ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವುದು ಕೂಡ ಇದರ ಉದ್ದೇಶವಾಗಿದೆ.

ಇನ್ನು ಈ ಸಮಯದಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸರಿಯಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರಿಗೆ 2 ಬಾರಿ ಪತ್ರ ಬರೆದು ಮನವಿ ಮಾಡಿದ್ದರು. ಆದರೆ ಪರೀಕ್ಷೆ ಮುಂದೂಡುವುದನ್ನು ನಿರಾಕರಿಸಿರುವ ಸರ್ಕಾರ ಸಂಪೂರ್ಣ ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದೆ.

ಇತ್ತ ಪ್ರತಿಪಕ್ಷಗಳಲ್ಲಿ ಕೇಂದ್ರದ ವಿರುದ್ಧದ ಹೋರಾಟಕ್ಕೆ, ಪ್ರಮುಖ ವಿಚಾರಗಳ ಚರ್ಚೆಗೆ ಒಮ್ಮತದ ಅಭಿಪ್ರಾಯ ಕೂಡ ಇಲ್ಲ ಎಂಬುದು ಇಂದಿನ ಸಭೆಯಿಂದ ತಿಳಿಯುತ್ತಿದೆ. ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿರೋ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಕೂಡ ಇಂದಿನ ಸಭೆಯಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌, ನಟ ಸೋನು ಸೂದ್ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 13ಕ್ಕೆ ನೀಟ್ ಪರೀಕ್ಷೆ ಮತ್ತು ಸೆಪ್ಟೆಂಬರ್ 1ರಿಂದ 6ರವರೆಗೆ ಜೆಇಇ ಪರೀಕ್ಷೆಗಳು ನಡೆಯಲಿವೆ. ಕೊರೋನಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಜೆಇಇ ಪರೀಕ್ಷಾ ಕೇಂದ್ರಗಳನ್ನು 570 ರಿಂದ 660ಕ್ಕೆ ಏರಿಸಲಾಗಿದೆ. ನೀಟ್ ಪರೀಕ್ಷಾ ಕೇಂದ್ರಗಳನ್ನು 2,546ರಿಂದ 3,843ಕ್ಕೆ ಹೆಚ್ಚಿಸಲಾಗಿದೆ. ಕೊಠಡಿಗಳಲ್ಲಿ 24 ಪರೀಕ್ಷಾರ್ಥಿಗಳ ಬದಲಾಗಿ 12 ಮಂದಿ ಇರಲಿದ್ದಾರೆ ಎಂದು NTA ತಿಳಿಸಿದೆ. ಈ ಬಾರಿ ದೇಶಾದ್ಯಂತ 8.58 ಲಕ್ಷ ಜೆಇಇ ಅಭ್ಯರ್ಥಿಗಳು ಮತ್ತು 15.97 ಲಕ್ಷ ನೀಟ್ ಪರೀಕ್ಷಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.


ಇದನ್ನೂ ಓದಿ: NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...