Homeಮುಖಪುಟಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ.

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ, ಅದೇ ಸ್ಥಳದಲ್ಲೀ ಕೂಡಲೇ ಪ್ರತಿಮೆ ನಿರ್ಮಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಚಲೋ ಹೋರಾಟ ನಡೆಯುತ್ತಿದ್ದು, ಭಾರೀ ಜನಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ. ಸಾಮಾಜಿಕ ಕಾರ್ಯಕರ್ತ ನಿಕೇತ್ ರಾಜ್ ಮೌರ್ಯ ನೇತೃತ್ವದಲ್ಲಿ ಮತ್ತೊಂದು ತಂಡ ಬೆಳಗಾಗಿ ತಲುಪಿದ್ದು ಅಲ್ಲಿನ ಸ್ಥಳೀಯರು, ಕನ್ನಡಪರ ಹೋರಾಟಗಾರರು ಸೇರಿ ಬೆಳಗಾವಿಯ ಸುವರ್ಣ ವಿಧಾನಸೌಧದೆಡೆಗೆ ಬೃಹತ್ ಮೆರವಣಿಗೆ ನಡೆಸುತ್ತಿದ್ದಾರೆ.

ಆಗಸ್ಟ್ 15 ರಂದು ಸಂಗೊಳ್ಳಿ ರಾಯಣ್ಣನ ಜನ್ಮದಿನದಂದು ಹಲವು ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ  ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಿದ್ದರು. ಆದರೆ ಪೊಲೀಸರು ಅದನ್ನು ತೆರವುಗೊಳಿಸಿ, ತಡೆಯಲು ಮುಂದಾದ ಕನ್ನಡಪರ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು.

ಅಂದಿನಿಂದ ನೂರಾರು ಕನ್ನಡಪರ ಸಂಘಟನೆಗಳು ಅದೇ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದು ಕುಳಿತಿವೆ. ಹತ್ತಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ದನಿಯೆತ್ತಲಾಗುತ್ತಿದೆ. ಆದರೂ ಸರ್ಕಾರವಾಗಲೀ, ಬೆಳಗಾವಿ ಜಿಲ್ಲಾಡಳಿತವಾಗಲಿ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಆಗಸ್ಟ್ 17 ರಂದು ಬೆಳಗಾವಿಯಲ್ಲಿ ಸಾವಿರಾರು ಜನರು ಸೇರಿ ಭಾರೀ ಪ್ರತಿಭಟನೆ ನಡೆಸಿದ್ದರು. ಪೀರನವಾಡಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಕೂಡಲೇ ಪ್ರತಿಮೆ ಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಅದೇ ದಿನ ಬೆಂಗಳೂರಿನಲ್ಲಿ ಕರ್ನಾಟಕ ರಣಧೀರ ಪಡೆಯಿಂದ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿಲ್ಲ ಎಂಬುದು ಪೊಲೀಸರ ವಾದವಾದರೆ, ಅಲ್ಲಿನ ಸ್ಥಳೀಯರು ಮೂರು ವರ್ಷಗಳಿಂದ ಅನುಮತಿಗೆ ಪ್ರಯತ್ನಿಸಲಾಗುತ್ತಿದೆ. ಪೀರನವಾಡಿ ಗ್ರಾಮಪಂಚಾಯ್ತಿಯು ಅನುಮತಿ ನೀಡಿದೆ. ಆದರೆ ಪೊಲೀಸರು ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ದನಿಯೆತ್ತಿದ್ದರು. ಶಾಂತಿಯುತವಾಗಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಸಹಕರಿಸಬೇಕು ಎಂದು ಕೋರಿದ್ದರು.

ಕರ್ನಾಟಕ ರಣಧೀರ ಪಡೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಯಣ್ಣಿನಿಗಾಗಿ ಉಪವಾಸ ಸತ್ಯಾಗ್ರಹ ಕೂಡ ನಡೆದಿತ್ತು. ನಿನ್ನೆ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಶಾಂತಿಯುತವಾಗಿ ವಿವಾದ ಬಗೆಹರಿಸುವಂತೆ ಮನವಿ ಮಾಡಿದ್ದರು.

ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಮಾತನಾಡಿ ವಿವಾದ ಬಗೆಹರಿಸಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದು, ಸ್ವಲ್ಪಸಮಯಾವಕಾಶಬೇಕು ಎಂದಿದ್ದರು.

ಇಂದು ಬೆಳಗಾವಿಯಲ್ಲಿ ಈ ವಿಚಾರಕ್ಕೆ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ಹಲವು ಭಾಗಗಳಿಂದ ಕನ್ನಡಿಗರು ಬೆಳಗಾವಿ ಚಲೋಗೆ ಕೈಜೋಡಿಸಿದ್ದಾರೆ. ಪೀರನವಾಡಿ ಸರ್ಕಲ್‌ಗೆ ರಾಯಣ್ಣ ವೃತ್ತ ಎಂದು ಹೆಸರಿಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಆದಷ್ಟು ಬೇಗ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗುವ ಸಂಭವವಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

Also Read: BJP: Yes to Savarkar, No to Kitturu Rani Chennamma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...