Homeಮುಖಪುಟಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

"ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ" ಎಂದು ಸಂಸದರು ಕಿಡಿಕಾರಿದ್ದಾರೆ.

- Advertisement -
- Advertisement -

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಘಟನೆ ಇಂದು ಸಂಭವಿಸಿದೆ.

ಉತ್ತರ ಪ್ರದೇಶದಿಂದ ನೇರ ಜಾರ್ಖಂಡ್‌ನ ಗಿರಿಡಿಹ್ ತೆರಳಿದ ಸಾಕ್ಷಿ ಮಹಾರಾಜ್ ಅಲ್ಲಿಂದ ಧನಬಾದ್‌ ಮೂಲಕ ಉನ್ನಾವ್‌ ತೆರಳಿ ಅಲ್ಲಿಂದ ರೈಲಿನಲ್ಲಿ ದೆಹಲಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಪಿರ್ಟಾಂಡ್ ಪೊಲೀಸ್ ಸ್ಟೇಷನ್ ಬಳಿ ತಡೆಯಲಾಗಿದೆ.

ಸಂಸದರು ಜಿಲ್ಲೆಗೆ ಬರುವ ವಿಷಯ ತಿಳಿಸಿರಲಿಲ್ಲ. ಕೋವಿಡ್ ಸಾಂಕ್ರಾಮಿಕ ಕಾರಣಕ್ಕಾಗಿ ರಾಜ್ಯ ಗಡಿಯನ್ನು ಬಂದ್ ಮಾಡಲಾಗಿದ್ದರು ನಿಬಂಧನೆಗಳನ್ನು ಉಲ್ಲಂಘಿಸಿ ರಾಜ್ಯ ಪ್ರವೇಶಿಸಿದ್ದಾಕ್ಕಿ ಅವರನ್ನು ನಗರದ ಶಾಂತಿ ಭವನದಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ತಮ್ಮನ್ನು ಕ್ವಾರಂಟೈನ್‌ಗೆ ಒಳಪಡಿಸುವುದಕ್ಕೆ ಖಂಡತುಂಡವಾಗಿ ವಿರೋಧ ವ್ಯಕ್ತಪಡಿಸಿದ ಸಾಕ್ಷಿ ಮಹಾರಾಜ್ “ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ” ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಮತ್ತು ಜಿಲ್ಲಾಧಿಕಾರಿಗಳ ಎದುರೆ ಉತ್ತರ ಪ್ರದೇಶದ ಚೀಫ್ ಸೆಕ್ರಟರಿಯವರಿಗೆ ಫೋನ್ ಮಾಡಿ ಅವರಿಂದ ಜಾರ್ಖಂಡ್ ಅಧಿಕಾರಿಗಳಿಗೆ ಮಾತನಾಡಿಸಿದ್ದಾರೆ. ಆದರೂ ಏನೂ ಪ್ರಯೋಜನವಾಗಿಲ್ಲ. ಜಾರ್ಖಂಡ್ ನಿಯಮಗಳ ಪ್ರಕಾರ ಅವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ಅಧಿಕಾರಿಗಳು ಖಡಕ್‌ ಆಗಿ ಹೇಳಿದ್ದಾರೆ.

ನನಗೆ ಭಾನುವಾರ ಸಂಸತ್ತಿನ ಸ್ಥಾಯಿ ಸಮಿತಿಯ ಸಭೆಯಿದೆ. ಹಾಗಾಗಿ ನಾನು ಹೋಗಲೇಬೇಕು. ಆದರೆ ನನ್ನನ್ನು ಬಲವಂತವಾಗಿ ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿನ ನಿಯಮಗಳು ನನಗೆ ಮೊದಲೇ ಗೊತ್ತಿದ್ದರೆ ಬರುತ್ತಲೇ ಇರಲಿಲ್ಲ ಎಂದು ಮಾಧ್ಯಮಗಳ ಎದುರು ಗೋಳು ತೋಡಿಕೊಂಡಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್‌ ಕೂಡ ಬುಧವಾರ ರಾಂಚಿಯ ರಿಮ್ಸ್‌ನಲ್ಲಿರುವ ತನ್ನ ತಂದೆಯನ್ನು ನೋಡಿ ಹೋಗಿದ್ದಾರೆ. ಅವರಿಗಿಲ್ಲದ ಕ್ವಾರಂಟೈನ್ ನನಗೆ ಏಕೆ? ಇಲ್ಲಿ ರಾಜಕೀಯ ನಡೆಯುತ್ತಿದೆ. ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...