Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ...

ಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ ಒತ್ತಾಯ

"ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು" ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಶಿಕ್ಷೆ ಪ್ರಕಟಗೊಳಿಸಲಿದೆ. ದೇಶದಾದ್ಯಂತ ಸುಮಾರು 122 ಜನ ಕಾನೂನು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟಿನ ತೀರ್ಪನ್ನು ಮರುಪರಿಶೀಲಿಸುವಂತೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯ ನ್ಯಾಯಾಧೀಶರಾದ ಬೊಬಡೆ ಮತ್ತು ಸುಪ್ರೀಂ ಕೋರ್ಟನ್ನು ಟೀಕಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂ ಸ್ವಯಂ ಪ್ರಕರಣ ದಾಖಲಿಸಿಕೊಂಡಿತ್ತು. ಭೂಷಣ್ ತಪ್ಪಿತಸ್ಥ ಎಂದು ಹೇಳಿದ ಸುಪ್ರೀಂ, ಕ್ಷಮೆ ಕೇಳಲು ಅವಕಾಶ ನೀಡಿತ್ತು. ಆದರೆ ಪ್ರಶಾಂತ್ ಭೂಷಣ್, “ನಾನು ಸಂವಿಧಾನದ ಅಡಿಯಲ್ಲಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಕ್ಷಮೆಯಾಚಿಸುವುದು “ನನ್ನ ಆತ್ಮಸಾಕ್ಷಿಯ ತಿರಸ್ಕಾರ” ಎಂದು ಭೂಷಣ್ ಆಗಸ್ಟ್ 24 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು. “ಹಾಗಾಗಿ ಕ್ಷಮೆ ಕೇಳುವ ಪ್ರಮೇಯವಿಲ್ಲ” ಎಂದು ಅಫಿಡವಿಟ್ ಸಲ್ಲಿಸಿದ್ದರು.

ಇದು ಸುಪ್ರೀಂ ಅನ್ನು ಮತ್ತಷ್ಟು ಅವಹೇಳನ ಮಾಡಿದೆ ಎಂದು ಸುಪ್ರೀಂ ಹೇಳಿತ್ತು. “ಭೂಷಣ್ ಅವರಂತಹ 30 ವರ್ಷಗಳ ಅನುಭವದ ಹಿರಿಯ ವಕೀಲರು ವರ್ತಿಸಬೇಕಾದ ರೀತಿ ಇದಲ್ಲ” ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅಭಿಪ್ರಾಯಪಟ್ಟಿದ್ದರು.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು.

ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.

ಇಂದು ಶಿಕ್ಷೆ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ‘ತೀರ್ಪನ್ನು ಮರುಪರಿಶೀಲಿಸುವಂತೆ’ ಒತ್ತಾಯಿಸಿ ಪತ್ರ ಬರೆದಿದ್ದಾರೆ ಎಂದು ಎನ್ ಡಿ ಟಿ ವಿ ವರದಿ ಮಾಡಿದ್ದಾಗಿ ಸ್ಕ್ರಾಲ್.ಇನ್ ತಿಳಿಸಿದೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್ ಮೇಲಿನ ಸುಪ್ರೀಂಕೋರ್ಟ್ ಕ್ರಮ ಅಸಂವಿಧಾನಿಕ: ನ್ಯಾಯಮೂರ್ತಿ ಕರ್ಣನ್‌

ವಿದ್ಯಾರ್ಥಿಗಳು ಪತ್ರದಲ್ಲಿ ನ್ಯಾಯಾಧೀಶರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಾರದರ್ಶಕತೆ, ಹೊಣೆಗಾರಿಕೆ, ಪರಿಸರ ಸಂರಕ್ಷಣೆ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಭೂಷಣ್ ವರ್ಷಗಳಿಂದ ನ್ಯಾಯಾಲಯಗಳಲ್ಲಿ ಹೋರಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾನೂನು ಭ್ರಾತೃತ್ವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಭೂಷಣ್ ಅವರ ಕೊಡುಗೆಯನ್ನು ಎಲ್ಲರೂ ಮೆಚ್ಚಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಭೂಷಣ್ ಅವರ ಎರಡು ಟ್ವೀಟ್‌ಗಳು ನ್ಯಾಯಾಲಯದ ಪಾವಿತ್ರ್ಯವನ್ನು ನೋಯಿಸುತ್ತವೆ ಎಂದು ಒಪ್ಪಲು ಸಾಧ್ಯವಿಲ್ಲ. ಬದಲಾಗಿ, ಅವರು ಅಂಚಿನಲ್ಲಿರುವ ಮತ್ತು ಧ್ವನಿರಹಿತ ಸಮುದಾಯದ ಧ್ವನಿಯನ್ನು ಪ್ರತಿನಿಧಿಸುತ್ತದೆ ಎಂದು ವಿದ್ಯಾರ್ತಿಗಳು ಪತ್ರದಲ್ಲಿ ಬರೆದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ವಿ.ಕೆ.ಅಯ್ಯರ್ ಅವರ ತೀರ್ಪನ್ನು ಉಲ್ಲೇಖಿಸಿ “ನ್ಯಾಯಾಂಗವನ್ನು ನ್ಯಾಯಯುತವಾಗಿ ಟೀಕಿಸುವುದು ಅಪರಾಧವಲ್ಲ. ಇದು ಪ್ರಜಾಪ್ರಭುತ್ವದಲ್ಲಿ ಅಗತ್ಯವಾದ ಹಕ್ಕು” ಎಂದು ಕಾನೂನು ವಿದ್ಯಾರ್ಥಿಗಳು ಹೇಳಿದರು.

ಆಗಸ್ಟ್ 14 ರ ತೀರ್ಪಿನ ನಂತರ, ಮಾಜಿ ನ್ಯಾಯಾಧೀಶರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು ಮತ್ತು ವಕೀಲರು ಸೇರಿದಂತೆ ನಾಗರಿಕ ಸಮಾಜದ 3,000 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿದ್ದರು.

ಪ್ರತಿಪಕ್ಷದ ನಾಯಕರು, ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳಲ್ಲದೆ ವಕೀಲರ ಸಂಘದ 1,800 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಟೀಕಿಸಿದ್ದರು.

2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿದ ನ್ಯಾಯಾಲಯವು ಇತ್ತೀಚಿನ ಪ್ರಕರಣದ ಕುರಿತು ಇಂದು ಶಿಕ್ಷೆ ಪ್ರಕಟಿಸಲಿದೆ. ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...