Homeಅಂತರಾಷ್ಟ್ರೀಯಗುಜರಾತ್‌ನಲ್ಲಿ ISI ಏಜೆಂಟ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಂಧಿಸಿದ NIA

ಗುಜರಾತ್‌ನಲ್ಲಿ ISI ಏಜೆಂಟ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಂಧಿಸಿದ NIA

ರಜಕ್ ಭಾಯ್ ಕುಂಭಾರ್ ಎಂಬ ವ್ಯಕ್ತಿಯನ್ನು ಪಶ್ಚಿಮ ಕಚ್ ಪ್ರದೇಶದಿಂದ ಬಂಧಿಸಲಾಗಿದ್ದು,  ಉತ್ತರಪ್ರದೇಶದಲ್ಲಿ ವರದಿಯಾದ ರಕ್ಷಣಾ/ಐಎಸ್‌ಐ ಪ್ರಕರಣಕ್ಕೂ ಈತನಿಗೂ ಸಂಬಂಧವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

ಪಾಕಿಸ್ತಾನದ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ (ಐಎಸ್ಐ)ನ ಏಜೆಂಟ್ ಆಗಿ ಕೆಲಸ ಮಾಡುತ್ತಿರುವುದರ ಬಗ್ಗೆ ಸುಳಿವು ಸಿಕ್ಕ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುಜರಾತ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.

ರಜಕ್ ಭಾಯ್ ಕುಂಭಾರ್ ಎಂಬ ವ್ಯಕ್ತಿಯನ್ನು ಪಶ್ಚಿಮ ಕಚ್ ಪ್ರದೇಶದಿಂದ ಬಂಧಿಸಲಾಗಿದ್ದು,  ಉತ್ತರಪ್ರದೇಶದಲ್ಲಿ ವರದಿಯಾದ ರಕ್ಷಣಾ/ಐಎಸ್‌ಐ ಪ್ರಕರಣಕ್ಕೂ ಈತನಿಗೂ ಸಂಬಂಧವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡೋಲಿ ಜಿಲ್ಲೆಯ ಮೊಘಲ್ಸ್‌ ರಾಯ್‌ನ ಮೊಹಮ್ಮದ್ ರಶೀದ್‌ ಎಂಬ ವ್ಯಕ್ತಿಯ ಬಂಧನಕ್ಕೆ ಸಂಬಂಧಿಸಿದಂತೆ ಲಖನೌದ ಗೋಮತಿ ನಗರ ಪೊಲೀಸ್ ಠಾಣೆಯಲ್ಲಿ ಜನವರಿ 19 ರಂದು ದಾಖಲಾದ ಎಫ್‌ಐಆರ್‌ಗೆ ಈ ಪ್ರಕರಣ ಸಂಬಂಧಿಸಿದೆ ಎಂದು ಎನ್ಐಎ ತಿಳಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಎನ್‌ಐಎ ಮತ್ತೆ ಪ್ರಕರಣ ದಾಖಲಿಸಿತ್ತು. ತನಿಖೆಯಲ್ಲಿ ರಶೀದ್ ಪಾಕಿಸ್ತಾನದ ರಕ್ಷಣಾ/ಐಎಸ್ಐ ಹ್ಯಾಂಡ್ಲರ್ ಗಳೊಂದಿಗೆ ಸಂಪರ್ಕದಲ್ಲಿದ್ದ ಮತ್ತು ಎರಡು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಣೆಯಾದ ಭಾರತೀಯ ಹೈಕಮಿಷನ್ ಅಧಿಕಾರಿಗಳು ಪಾಕಿಸ್ತಾನಿ ISI ವಶದಲ್ಲಿ: ಉನ್ನತ ಮೂಲಗಳು

ಭಾರತದಲ್ಲಿ ಕೆಲವು ಸೂಕ್ಷ್ಮ ಮತ್ತು ಕಾರ್ಯತಂತ್ರದ ಮಹತ್ವದ ಸ್ಥಾಪನೆಗಳ ಛಾಯಾಚಿತ್ರಗಳನ್ನು ರವಾನಿಸಿ, ಪಾಕಿಸ್ತಾನದ ಐಎಸ್ಐ ಹ್ಯಾಂಡ್ಲರ್ ಗಳೊಂದಿಗೆ ಸಶಸ್ತ್ರ ಪಡೆಗಳ ಚಲನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು ಎಂದು ಎನ್ಐಎ ತಿಳಿಸಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕುಂಭಾರ್ ಅವರ ಮನೆಯಲ್ಲಿ ಶೋಧ ನಡೆಸಿದ್ದು, ಅವರು 5,000 ರೂಗಳನ್ನು ಪೇಟಿಎಂ ಮೂಲಕ ರಿಜ್ವಾನ್ ಎನ್ನುವವನ ಖಾತೆಗೆ ವರ್ಗಾಯಿಸಿರುವುದು ಪತ್ತೆಯಾಗಿದ್ದು, ಇದನ್ನು ಮೊಹಮ್ಮದ್ ರಶೀದ್ ಹಸ್ತಾಂತರಿಸಲಾಯಿತು ಎಂದು ತಿಳಿದುಬಂದಿದೆ.

ಐಎಸ್‌ಐ ಏಜೆಂಟರ ನಿರ್ದೇಶನದ ಮೇರೆಗೆ ಈ ಮೊತ್ತವನ್ನು ಕುಂಭರ್ ರಶೀದ್‌ಗೆ ರವಾನಿಸಿದ್ದಾನೆ. ಕುಂಭಾರ್ ಮನೆಯ ಶೋಧದ ಸಮಯದಲ್ಲಿ, ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.


ಇದನ್ನೂ ಓದಿ: ಅಚ್ಛೇ ದಿನ್ ಮರೆಯಿರಿ: ಭಯೋತ್ಪಾದನೆ, ಪಾಕ್, ಮುಸ್ಲಿಮರ ಬಗ್ಗೆ ಭೀತರಾಗಿರಿ.. – ಮೋದಿಯ ಹೊಸ ಮಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...