Homeಕರ್ನಾಟಕಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕಳೆದೊಂದು ವಾರದಿಂದ ರಾಜ್ಯದಲ್ಲಿ ಈಗ ಕೊರೊನಾಗಿಂತ ಮಾದಕ ದ್ರವ್ಯದ ವಿಚಾರವೇ ಹೆಚ್ಚು ಚರ್ಚೆಗೊಳಪಡುತ್ತಿದೆ. ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ ಎನ್ನುವ ವಿಚಾರ ರಾಜ್ಯದ ಜನರನ್ನು ಬೆಚ್ಚಿಬೀಳಿಸುತ್ತಿದೆ. ಇದರಲ್ಲಿ ಹಿರಿತೆರೆ ಜೊತೆಗೆ ಕಿರುತೆರೆಯ ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಈ ಕುರಿತು ಇಂದು ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಿದ್ದಾರೆ. ನಂತರ “ರಾಜ್ಯ ಸರ್ಕಾರ ಕೂಡ ಡ್ರಗ್ಸ್ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಡ್ರಗ್ಸ್ ದಂಧೆ ನಿಯಂತ್ರಣ ಮತ್ತು ಡ್ರಗ್ಸ್ ಹಾವಳಿ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ. ವಿಸಾ ಅವಧಿ ಮುಗಿದ ಮೇಲು ಭಾರತದ ಉಳಿದ ವಿದೇಶಿಗರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವುದು, ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮೊನ್ನೆಯಷ್ಟೇ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ದಂಧೆಯಲ್ಲಿ ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಒಟ್ಟಾರೆ, ಬಾಲಿವುಡ್‌ಗೆ ಮಾತ್ರ ಸೀಮಿತವಾಗಿದ್ದ ಡ್ರಗ್ಸ್ ದಂಧೆ ಕನ್ನಡ ಚಿತ್ರರಂಗ, ಕಿರುತೆರೆಗೂ ಕಾಲಿಟ್ಟಿದ್ದು, ಸೂಕ್ತ ಹಾಗೂ ಪ್ರಾಮಾಣಿಕ ತನಿಖೆಯಿಂದಷ್ಟೇ ಮತ್ತಷ್ಟು ವಿಚಾರಗಳು ಬಯಲಿಗೆ ಬರಲು ಸಾಧ್ಯ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...