Homeಮುಖಪುಟಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ತಡರಾತ್ರಿ ಡಾ.ಕಫೀಲ್‌ ಖಾನ್ ಬಿಡುಗಡೆ

ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ತಡರಾತ್ರಿ ಡಾ.ಕಫೀಲ್‌ ಖಾನ್ ಬಿಡುಗಡೆ

ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿತ್ತು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ.ಕಫೀಲ್‌ ಖಾನ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದ ಬೆನ್ನಲೇ ನಿನ್ನೆ ಮಧ್ಯ ರಾತ್ರಿ ಅವರನ್ನು ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಅಲಹಾಬಾದ್ ಹೈಕೋರ್ಟ್ ಮಂಗಳವಾರ ಡಾ.ಕಫೀಲ್‌ ಖಾನ್ ಬಂಧನವನ್ನು ಕಾನೂನುಬಾಹಿರ ಎಂದು ಕರೆದಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಿದೆ. ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಯನ್ನು ಪ್ರಚೋದಿಸುವಂತಿರಲಿಲ್ಲ. ಅದು ರಾಷ್ಟ್ರೀಯ ಏಕತೆ ಮತ್ತು ಜನರ ನಡುವೆ ಭಾವೈಕ್ಯತೆಯನ್ನು ಸಾರುವಂತೆ ಕರೆ ಕೊಡುವಂತಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಡಾ.ಕಫೀಲ್‌ ಖಾನ್‌ ಈ ಹಿಂದೆ ಹಲವು ಮನವಿಗಳನ್ನು ಮಾಡಿದ್ದರು. ಕೊನೆಗೂ ಅವರ ಅರ್ಜಿಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್‌ನ ನ್ಯಾ.ಸುಮಿತ್ರಾ ದಯಾಳ್‌ ಸಿಂಗ್‌ ಮತ್ತು ನ್ಯಾ.ಗೋವಿಂದ ಮಾಥೂರ್‌ ಅವರಿದ್ದ ಪೀಠವು ಅವರ ಬಿಡುಗಡೆಗೆ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ತೀರ್ಪಿನ ನಂತರವೂ, ಜೈಲಿನ ಅಧಿಕಾರಿಗಳು ಡಾ.ಕಫೀಲ್‌ ಖಾನ್ ಅವರನ್ನು ಬಿಡುಗಡೆ ಮಾಡುವುದಕ್ಕೆ ಗಂಟೆಗಟ್ಟಲೆ  ತಡ ಮಾಡಿದಾಗ, ಅವರ ಕುಟುಂಬವು ಅಲಹಾಬಾದ್ ಹೈಕೋರ್ಟ್‌ನಲ್ಲಿ ತಿರಸ್ಕಾರ ಅರ್ಜಿ ಸಲ್ಲಿಸುವುದಾಗಿ ತಿಳಿಸಿತ್ತು.

“ನನ್ನ ಮಗ ಜೈಲಿನಿಂದ ಹೊರಬರುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ನಾನು ಅವನನ್ನು ನೋಡಲು, ಸ್ಪರ್ಶಿಸಲು ಸಾಧ್ಯವಾಗುತ್ತದೆ” ಎಂದು ಮಥುರಾ ಜೈಲಿಗೆ ತೆರಳುವಾಗ ಕಫೀಲ್ ಅವರ ತಾಯಿ ಎಂ.ಎಸ್. ಪರ್ವೀನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ ಎಂದು ಎನ್ ಡಿ ಟಿ ವಿ ಹೇಳಿದೆ.

“ನನ್ನ ಮಗ ಒಳ್ಳೆಯ ವ್ಯಕ್ತಿ. ಅವನು ಎಂದಿಗೂ ದೇಶ ಅಥವಾ ಸಮಾಜಕ್ಕೆ ವಿರೋಧಿಯಲ್ಲ. ಇಂದು ನನ್ನ ಸೊಸೆಯ ಜನ್ಮದಿನ. ಹಾಗಾಗಿ ಅವಳಿಗೆ ಕೇಕ್ ಕೂಡ ತೆಗೆದುಕೊಂಡುಹೋಗುತ್ತಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಡಾ.ಕಫೀಲ್ ಖಾನ್ ಜೀವಕ್ಕೆ ಅಪಾಯವಿದೆ : ಖಾನ್‌ ಪತ್ನಿಯ ಆರೋಪ

ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಅವರ ಮೇಲೆ ಮೊದಲ ಬಾರಿಗೆ ಆರೋಪ ಹೊರಿಸಲಾಗಿದ್ದರೂ, ಈ ವರ್ಷ ಫೆಬ್ರವರಿ 13ರಂದು ಜಾಮೀನು ನೀಡಿದ ಎರಡು ದಿನಗಳ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಆರೋಪ ಹೊರಿಸಿದ್ದು ಪ್ರಸ್ತುತ ಮಥುರಾ ಜೈಲಿನಲ್ಲಿದ್ದರು.

ಆಗಸ್ಟ್ 16ರಂದು NSA ಪ್ರಕರಣದಲ್ಲಿ ಇನ್ನು ಮೂರು ತಿಂಗಳ ಕಾಲ ಅವರ ಬಂಧನವನ್ನು ವಿಸ್ತರಿಸುವಂತೆ ಕೇಳಿಕೊಳ್ಳಲಾಗಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ‌ ಎನ್‌ಎಸ್‌ಎ ಕಾಯಿದೆಯಡಿ ಡಾ. ಕಫೀಲ್‌ ಖಾನ್‌ ಬಂಧನ  ಕಾನೂನಿನಡಿ ಮಾನ್ಯವಲ್ಲ. ಹಾಗಾಗಿ ಅವರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಹೇಳಿದೆ.

2017 ರಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಗೋರಖ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳ ಸಾವಿನಲ್ಲಿ ಕಫೀಲ್ ಖಾನ್ ಅವರನ್ನು ಅಮಾನತುಗೊಳಿಸಲಾಗಿತ್ತು. ನಂತರ ಬಂಧಿಸಿ, ಜೈಲಿಗೆ ಹಾಕಲಾಗಿತ್ತು.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...