Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...