Homeಮುಖಪುಟಮೋದಿಯ ಗುಜರಾತ್ ಮಾಡಲ್: MGNREGA ಸ್ಕೀಂ ಅಡಿಯಲ್ಲಿ ಸತ್ತ ವ್ಯಕ್ತಿಗೂ ಸಂಬಳ ಬಿಡುಗಡೆ!: ಜಿಗ್ನೇಶ್ ಮೇವಾನಿ

ಮೋದಿಯ ಗುಜರಾತ್ ಮಾಡಲ್: MGNREGA ಸ್ಕೀಂ ಅಡಿಯಲ್ಲಿ ಸತ್ತ ವ್ಯಕ್ತಿಗೂ ಸಂಬಳ ಬಿಡುಗಡೆ!: ಜಿಗ್ನೇಶ್ ಮೇವಾನಿ

"ಲಾಕ್ ಡೌನ್ ಸಮಯದಲ್ಲಿಯೂ ಸಹ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯಡಿ ಸತ್ತ ವ್ಯಕ್ತಿಗೆ ಕೆಲಸವನ್ನು ನೀಡಿದೆ ಎಂದರೆ, ಭ್ರಷ್ಟಾಚಾರದ ಮಟ್ಟವನ್ನು ನೀವೇ ಊಹಿಸಿ" ಎಂದು ಜಿಗ್ನೇಶ್ ಮೇವಾನಿ ಹೇಳಿದರು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಅಡಿಯಲ್ಲಿ ಸತ್ತ ವ್ಯಕ್ತಿಯ ಹೆಸರಿನಲ್ಲಿ ವೇತನ ಬಿಡುಗಡೆಯಾಗಿರುವ ದೊಡ್ಡ ಹಗರಣ ಮುನ್ನೆಲೆಗೆ ಬಂದಿದೆ.

MGNREGA ದ ಇತ್ತೀಚಿನ ದಾಖಲೆಗಳ ಪ್ರಕಾರ, ಹಲವು ದಿನಗಳ ಹಿಂದೆ ಸಾವನ್ನಪ್ಪಿರುವ ಕಾರ್ಮಿಕನ ಹೆಸರಿನಲ್ಲಿ, ಸೈನಿಕನ ಹೆಸರಿನಲ್ಲಿ, ಕೆಲವು ಶಿಕ್ಷಕರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ, ಸಂಬಳ ಪಡೆಯಲಾಗಿದೆ ಎಂಬುದು ತಿಳಿದುಬಂದಿದೆ.

“ದಾಖಲೆಗಳಪ್ರಕಾರ, ಈ ವ್ಯಕ್ತಿಗಳು ಏಪ್ರಿಲ್ 2020 ರವರೆಗೆ ಸಂಬಳವನ್ನು ಪಡೆಯುತ್ತಿದ್ದರು. ಆದರೆ ಅವರು ಬಹಳ ಹಿಂದೆಯೇ ನಿಧನರಾಗಿದ್ದಾರೆ. ಲಾಕ್ ಡೌನ್ ಸಮಯದಲ್ಲಿಯೂ ಸಹ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯಡಿ ಸತ್ತ ವ್ಯಕ್ತಿಗೆ ಕೆಲಸವನ್ನು ನೀಡಿಲಾಗಿದೆ ಎಂದರೆ ಭ್ರಷ್ಟಾಚಾರದ ಮಟ್ಟವನ್ನು ನೀವೇ ಊಹಿಸಿ” ಎಂದು ಹಗರಣವನ್ನು ಬಹಿರಂಗಪಡಿಸಿದ ವಡ್ನಗರ್ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಅವರು ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರೊಂದಿಗೆ ಜಿಗ್ನೇಶ್ ಮೇವಾನಿ, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದರು.

ಇದನ್ನೂ ಓದಿ: ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಗುಜರಾತ್‌ನ ಬನಸ್ಕಂತ ಜಿಲ್ಲೆಯ ಹಳ್ಳಿಯಲ್ಲಿ ಬಹು ಕೋಟಿ ಹಗರಣ ಬೆಳಕಿಗೆ ಬಂದಿದ್ದು, MGNREGA ಯೋಜನೆಯಡಿ ಹಣ ವರ್ಗಾವಣೆಯ ಅರಿವಿಲ್ಲದ ಸುಮಾರು 500 ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಜಿಗ್ನೇಶ್ ಮೇವಾನಿ ಆರೋಪಿಸಿದ್ದರು.

ಇದೇ ರೀತಿಯ ಮತ್ತೊಂದು ಹಗರಣವು ಬೆಳಕಿಗೆ ಬಂದಿದ್ದು, ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನದ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದರು.

“ಇದು ರಾಜ್ಯದಾದ್ಯಂತ ನಡೆಯುತ್ತಿರುವ ಹಗರಣವಾಗಿದ್ದು, ಸತ್ತ ಜನರ ಹೆಸರಿನಲ್ಲಿ ಸುಳ್ಳು ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಬಡ ಜನರಿಗೆ ಕಳುಹಿಸಿದ ಹಣವನ್ನು ಬಿಜೆಪಿ ಸರ್ಕಾರದ ಕಣ್ಗಾವಲಿನಲ್ಲಿರುವ ಸರ್ಕಾರಿ ಅಧಿಕಾರಿಗಳು ಕದ್ದಿದ್ದಾರೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಇವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಮೇವಾನಿ ಆಗ್ರಹಿಸಿದರು.

ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ಮೇವಾನಿ, ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ದೂರವಾಣಿಯಲ್ಲಿ ನ್ಯಾಷನಲ್ ಹೆರಾಲ್ಡ್ ಗೆ ತಿಳಿಸಿದ್ದಾರೆ.

“ಇದು ಕೇವಲ ಹಣದ ವಿಷಯ ಅಲ್ಲ. ಆದರೆ, ಸಂವಿಧಾನ ನಮಗೆ ಒದಗಿಸಿರುವ ಜೀವನೋಪಾಯದ ಹಕ್ಕುಗಳನ್ನು ದೋಚುತ್ತಿರುವ ಭ್ರಷ್ಟ ಅಧಿಕಾರಿಗಳು ಮತ್ತು ರಾಜಕೀಯ ನಾಯಕರು, ಬಿಜೆಪಿಯ ಉನ್ನತ ನಾಯಕರ ನೇರ ಪ್ರೋತ್ಸಾಹವನ್ನು ಪಡೆಯುತ್ತಿದ್ದಾರೆ” ಎಂದು ಮೇವಾನಿ ಹೇಳಿದರು.


ಇದನ್ನೂ ಓದಿ: MGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...