ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಯನ್ನು ನಿಲ್ಲಿಸುವಂತೆ ಬೆದರಿಕೆಗಳು ಬರುತ್ತಿವೆ ಎಂದು ರಾಘವೇಂದ್ರ ಹುಣಸೂರು ಹೇಳಿದ್ದಾರೆ.
ಜೀ ವಾಹಿನಿಯ ಮುಖ್ಯ ನಿರ್ವಾಹಕರಾಗಿರುವ ರಾಘವೇಂದ್ರ ಹುಣಸೂರು ಅವರಿಗೆ ಈ ಕುರಿತು ಬೆದರಿಕೆಗಳು ಬಂದಿವೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!
“ಮಹಾನಾಯಕ ಧಾರಾವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಮಧ್ಯರಾತ್ರಿಯಲ್ಲಿ ತುಂಬಾ ಕರೆಗಳು ಮತ್ತು ಸಂದೇಶಗಳು ಬರುತ್ತಿವೆ. ಇದು ಬೆದರಿಕೆಯಂತೆ ಕಾಣುತ್ತಿದೆ. ಆದರೆ ವೈಯಕ್ತಿಕವಾಗಿ ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮಹಾನಾಯಕ ಮುಂದುವರೆಯುತ್ತದೆ. ಜೊತೆಗೆ ಇದು ನಮ್ಮ ಹೆಮ್ಮೆಯಾಗಿದ್ದು, ಇದರಲ್ಲಿ ವೈಯಕ್ತಿಕ ಪ್ರೀತಿಯೂ ಸೇರಿದೆ. ಇದನ್ನು ಒಂದು ಸಮಸ್ಯೆ ಎಂದು ನೀವು ಪರಿಗಣಿಸಿದರೆ, ವಾಸ್ತವದಲ್ಲಿ ಸಮಾಜಕ್ಕೆ ನೀವೇ ಒಂದು ಸಮಸ್ಯೆ! ಜೈ ಭೀಮ್” ಎಂದು ಟ್ವೀಟ್ ಮಾಡಿದ್ದಾರೆ.
— Raghavendra Hunsur (@vishvamukhi) September 3, 2020
ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಜೀವನಾಧಾರಿತ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡು ಕರ್ನಾಟಕದಾದ್ಯಂತ ಮನೆಮಾತಾಗಿದೆ.
ಈ ಧಾರಾವಾಹಿ ಪ್ರಸಾರವಾದಾಗಿನಿಂದ ಕರ್ನಾಟಕದ ಜನತೆ, ಹಲವಾರು ಹಳ್ಳಿಗಳಲ್ಲಿ ಧಾರಾವಾಹಿಯ ಬ್ಯಾನರ್ ಹಾಕಿ, ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.
ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ


