ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಸಂಬಂಧ ಚಲನಚಿತ್ರ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆಯಿಂದ ತೀವ್ರ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಸಂಜೆ ವೇಳೆಗೆ ವಾರೆಂಟ್ ಪಡೆದು ಬಂಧಿಸಿದ್ದಾರೆ.
ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?
ನಟಿ ರಾಗಿಣಿ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿರುವ ಪೊಲೀಸರು, ಅದರ ಮೂಲಕವೇ ನ್ಯಾಯಾಲಯದಿಂದ ವಾರೆಂಟ್ ಪಡೆದು ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ದಾಳಿ ನಂತರ ವಶಕ್ಕೆ ಪಡೆದಿದ್ದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.
ರಾಗಿಣಿ ಮನೆಯಲ್ಲಿ ಮಹತ್ವದ ವಸ್ತುಗಳನ್ನು ಜಪ್ತಿ ಮಾಡಿದ್ದು, ಅವುಗಳ ಮಾಹಿತಿ ಗೌಪ್ಯವಾಗಿರಿಸಲಾಗುತ್ತದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ


