Homeಕರ್ನಾಟಕಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ದುಷ್ಕಮಿಗಳು ಹತ್ಯೆ ಮಾಡಿ ಇಂದಿಗೆ ಮೂರು ವರ್ಷವಾಗಿದ್ದು, ದೇಶಾದ್ಯಂತ ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮಗಳು ನಡೆಯುತ್ತಿದೆ.

ಇಂದು ಮುಂಜಾನೆ ಒಂಬತ್ತು ಗಂಟೆಗೆ ಗೌರಿ ಲಂಕೇಶ್‌ ಸಮಾಧಿಗೆ ಭೇಟಿ ಮಾಡಿದ ಗೌರಿ ಲಂಕೇಶ್ ಸ್ನೇಹಿತ ಬಳಗ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಹೋರಾಟಗಾರ ನೂರ್‌ ಶ್ರೀಧರ್‌, “ಪಿ ಲಂಕೇಶ್ ಸಾವಿನ ನಂತರ ಧೀಮಂತ ಪತ್ರಿಕೆಯ ಜವಾಬ್ದಾರಿ ಗೌರಿ ಲಂಕೇಶ್ ಮೇಲೆ ಬಿತ್ತು. ಅಪ್ಪನ ಜವಾಬ್ದಾರಿ ಹೊತ್ತುಕೊಂಡು ಕಷ್ಟಪಟ್ಟು ಪತ್ರಿಕೆ ಮುನ್ನಡೆಸಿದ ಅವರದು ಬಹುಪಾಲು ಪ್ರವಾಹದ ವಿರುದ್ಧದ ಈಜು. ‌ಪತ್ರಕರ್ತೆ ಮಾತ್ರವಾಗಿಯಲ್ಲದೇ ಜನಪರ ಚಳವಳಿಗಳ ಸಂಗಾತಿಯಾಗಿ ಗೌರಿ ಲಂಕೇಶ್ ಬೆಳೆದ ಪರಿ ಅನನ್ಯ” ಎಂದರು.

ಗೌರಿ ಲಂಕೇಶ್‌ರವರನ್ನು ಮುಗಿಸುವ ಮೂಲಕ ದನಿ ಅಡಗಿಸಲು ಬಲಪಂಥೀಯರು ಪ್ರಯತ್ನಿಸಿದರು. ಆದರೆ ಅವರ ಪತ್ರಿಕೆಯನ್ನು ಮುನ್ನಡುಸುವ ಮೂಲಕ ಅವರ ಆಶಯಗಳನ್ನು ಮುಂದುವರೆಸಲು ನಾವೆಲ್ಲರೂ ಪ್ರಯತ್ನಿಸುತ್ತಿದ್ದೇವೆ. ಆದರೆ ಲಂಕೇಶ್ ಇದ್ದಾಗಿನ ಪ್ರವಾಹ, ಗೌರಿ ಇದ್ದಾಗಿನ ಪ್ರವಾಹ ಮತ್ತು ಇಂದಿನ ಪ್ರವಾಹ ಬೇರೆ ಬೇರೆಯಾಗಿವೆ. ಪ್ರವಾಹದ ತೀವ್ರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಕಚ್ಚಿಕೊಂಡು ನಿಂತುಕೊಂಡು ಅದರ ವಿರುದ್ಧ ಸಂಘರ್ಷ ನಡೆಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ರವರ ಸ್ಮರಣೆ..

Posted by Naanu Gauri on Friday, September 4, 2020

ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮವು ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ನಿನ್ನೆ ’ಗೌರಿ ನೆನಹು’ ಆಯೋಜನೆಯಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ಯ್ರ ಹೋರಾಟಗಾರ ದೊರೆಸ್ವಾಮಿ ಮಾತನಾಡಿ, ಕೋಮುವಾದಿಗಳು ಗೌರಿಯನ್ನು ಕೊಂದಿರಬಹುದು ಆದರೆ ಅವರ ಚಿಂತನೆಗಳು ಸದಾ ಇರುತ್ತದೆ, ಅವರು ಹಾಕಿಕೊಟ್ಟ ಮೌಲ್ಯಗಳ ಅಡಿಯಲ್ಲಿ ಸಾಗಿ ಧೈರ್ಯದಿಂದ ಕೋಮುವಾದಿಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ದರು. ಕಾರ್ಯಕ್ರಮದಲ್ಲಿ ಕವಿತಾ ಲಂಕೇಶ್, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಗೌರಿ ಮೀಡಿಯಾ ಟ್ರಸ್ಟ್‌‌ನ ದೊಡ್ಡಿಪಾಳ್ಯ ನರಸಿಂಹ ಮೂರ್ತಿ‌ ಸೇರಿದಂತೆ ಹಲವಾರು ಭಾಗಿಯಾಗಿದ್ದರು.

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್…

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್ಮಾತನಾಡುವವರುಎಚ್.ಎಸ್.ದೊರೆಸ್ವಾಮಿ, ಚಂದ್ರಶೇಖರ್‌ ಆಜಾದ್‌ ರಾವಣ್‌, ತೀಸ್ತಾ ಸೆಟ್ಲ್‌ವಾದ್‌, ನೂರ್‌ ಶ್ರೀಧರ್‌, ಕವಿತಾ ಲಂಕೇಶ್

Posted by Naanu Gauri on Friday, September 4, 2020

ಅಷ್ಟೇ ಅಲ್ಲದೆ, ಪಿಯುಸಿಎಲ್ ಕರೆಯಂತೆ ದೇಶದಾದ್ಯಂತ ಆಗಸ್ಟ್ 28 ರಿಂದ ಸೆಪ್ಟೆಂಬರ್‌ 5 ರ ವರೆಗೆ ಒಂದು ವಾರ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, 70 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

ದೆಹಲಿ ಗಲಭೆಯ ನೈಜ ಅಪರಾಧಿಗಳನ್ನು ಬಂಧಿಸುವಂತೆ, ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸುವಂತೆ, ಸಿಎಎ-ಎನ್‌ಆರ್‌ಸಿ-ಎನ್‌ಆರ್‌ಪಿ ಮತ್ತು ಯುಎಪಿಎಯನ್ನು ರದ್ದುಗೊಳಿಸುವಂತೆ ಹಾಗೂ ಪ್ರಜಾಪ್ರಭುತ್ವ ಹಕ್ಕಿನ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ವಿರೋಧಿಸಿ ಗೌರಿ ಲಂಕೇಶ್ ಹುತಾತ್ಮ ದಿನದ ಅಂಗವಾಗಿ ಜಂಶೆಡ್‌ಪುರದ ಡಿಸಿ ಕಚೇರಿಯ ಮುಂದೆ ಪ್ರತಿಭಟನಾ ಸಭೆ ನಡೆಯಲಿದೆ.

ಗೌರಿ ಲಂಕೇಶ್‌ ಅವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ.

ಮೂಲ ಕವಿತೆ :Kavitha Lankeshಕನ್ನಡಕ್ಕೆ : Shiva Sundarಪ್ರಸ್ತುತಿ:Najma Nazeer Chikkaneraleಸಂಕಲನ:Viewlivetv Irshad Kalkatta#ifwedonotrise #ifwedonotrisekarnataka #ನಾವೆದ್ದುನಿಲ್ಲದಿದ್ದರೆ‌ #GauriLankesh #poetry ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಮಾತಾಡೋಣ ಸೆಪ್ಟೆಂಬರ್ ೫ರಂದು.

Posted by Najma Nazeer Chikkanerale on Tuesday, September 1, 2020

’ನಾವೆದ್ದು ನಿಲ್ಲದಿದ್ದರೆ’ ಅಭಿಯಾನವನ್ನು ಬೆಂಬಲಿಸಿರುವ ’ಸೃಜನಿ ಧಾರವಾಡ’ ತಂಡವು, ’ಗೌರಿ ನೆನಪಿಗೊಂದು ಹೂ’ ಎಂಬ ಗೌರಿ ಲಂಕೇಶರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ರಜನಿ ಗರುಡ, ಡಾ. ಸುರೇಖಾ ದೇವಿ, ಡಾ. ವಿನಯಾ ಒಕ್ಕುಂದ, ಡಾ. ಸಿದ್ದನಗೌಡ ಪಾಟಿಲ,ಡಾ. ಮಾಲತಿ ಪಟ್ಟಣಶೆಟ್ಟಿ ಸೇರಿದಂತೆ ಹಲವಾರು ಜನರು ಭಾಗವಹಿಸಿಲಿದ್ದಾರೆ.

ಇಷ್ಟೇ ಅಲ್ಲದೆ ದೇಶದ ಹಲವಾರು ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ಪತ್ರಕರ್ತರು ಹುತಾತ್ಮ ಗೌರಿ ಲಂಕೇಶ್‌ ಅವರನ್ನು ನೆನಪಿಸಿಕೊಂಡಿದ್ದಾರೆ.


ಇದನ್ನೂ ಓದಿ: ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...