Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಪೋಟೋಗಳನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಘಟನೆಗೆ ಮಮತಾ ಬ್ಯಾನರ್ಜಿ ಕಾರಣ ಎಂದು ಆರೋಪಿದ್ದಾರೆ.

- Advertisement -
- Advertisement -

ಪಶ್ವಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ಮುಸ್ಲಿಮರು ಹಿಂದೂ ದೇವತೆ ಕಾಳಿ ಮಾತೆಯ ವಿಗ್ರಹ ಸುಟ್ಟಿದ್ದಾರೆ ಹಾಗೂ ದೇವಸ್ಥಾನ ಧ್ವಂಸಗೊಳಿಸಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ್ಧಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣದಲ್ಲಿ ಸುಟ್ಟ ದೇವತೆಯ ಮೂರ್ತಿಯೊಂದರ ಚಿತ್ರ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ಇದೇ ಪೋಟೋಗಳನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಎಂಬುವರು,  ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮುಸ್ಲಿಂ ಸಮುದಾಯದ ಜನರು ಕಾಳಿ ಮಾತೆಯ ವಿಗ್ರಹಕ್ಕೆ ಬೆಂಕಿ ಇಟ್ಟಿದ್ದಾರೆ. ಇದು ಮುಖ್ಯಮಂತ್ರಿ ದೀದಿಯ ಜಿಹಾದಿ ರಾಜಕೀಯಕ್ಕೆ ಉದಾಹರಣೆಯಾಗಿದೆ ಎಂದು ಅವರು ಆರೋಪಿಸಿದ್ದರು.

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರೂ ಕೂಡಾ ಇದೇ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸೋಣ.

ಪೋಸ್ಟ್‌ನ ಆರ್ಕವೈ ಮಾಡಲಾದ ಆವೃತ್ತಿಯನ್ನು ಇಲ್ಲಿ ಕಾಣಬಹುದು.

ಪ್ರತಿಪಾದನೆ: ಮುಸ್ಲಿಮರು ಕಾಳಿ ದೇವರ ವಿಗ್ರಹ ಸುಟ್ಟು, ದೇವಸ್ಥಾನ ದ್ವಂಸಗೊಳಿದ್ದಾರೆ.
ಸತ್ಯಾಂಶ: ಕಾಳಿ ದೇವಸ್ಥಾನವನ್ನು ಯಾವುದೇ ಗುಂಪು ದ್ವಂಸ ಮಾಡಿಲ್ಲ. ದೇವಸ್ಥಾನದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆ ಸಮಯದಲ್ಲಿ ವಿಗ್ರಹ ಸುಟ್ಟಿತ್ತು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

ಅರ್ಜುನ್‌ ಸಿಂಗ್ ಅರೋಪಿಸಿ ಮಾಡಿರುವ ಟ್ವೀಟ್‌ಅನ್ನು ಪ್ರತಿಕ್ರಿಯಿಸಿ ರೀಟ್ವೀಟ್‌ ಮಾಡಿರುವ ಮುರ್ಶಿದಾಬಾದ್ ಪೊಲೀಸರು ಇದಕ್ಕೆ ಸ್ಪಷ್ಟನೆ ನೀಡಿದ್ದು, “ಮುಸ್ಲಿಮರು ಈ ದೇಗುಲಕ್ಕೆ ಬೆಂಕಿ ಇಟ್ಟರು ಎಂಬ ಆಪಾದನೆಯನ್ನು ಸುಳ್ಳು. ದೇವಾಲಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಆ ಸಂದರ್ಭದಲ್ಲಿ ದೇವರ ವಿಗ್ರಹ ಸುಟ್ಟಿದೆ. ಅಲ್ಲದೆ, ದೇವಸ್ಥಾನದಲ್ಲಿ ಹಲವು ವಸ್ತುಗಳು ಸುಟ್ಟುಹೋಗಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಬಂಗಾಳಿ ಭಾಷೆಯಲ್ಲಿ ಬರೆಯಲಾದ ಪತ್ರದಲ್ಲಿ, ಮುರ್ಶಿದಾಬಾದ್ ಪೊಲೀಸರು ಇದೊಂದು ಅಗ್ನಿ ಅನಾಹುತ ಎಂದು ವರದಿ ನೀಡಿದ್ದು, ದೇವಸ್ಥಾನದ ಆಡಳಿತ ಮಂಡಳಿ ಕೂಡಾ ದೇಗುಲದಲ್ಲಿ ಹಚ್ಚಿದ್ದ ಹಣತೆಯ ಮೂಲಕ ಆಕಸ್ಮಿಕವಾಗಿ ಬೆಂಕಿ ಅಫಘಾತ ಸಂಭವಿಸಿದೆ ಎಂದು ಹೇಳಿದೆ.
ದೇವಾಲಯ ಆಡಳಿತ ಮಂಡಳಿಯು ದೇವಾಲಯದ ಪುನರ್‌ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ಪೊಲೀಸ್, ಜಿಲ್ಲಾಡಳಿತ ನೆರವಿಗೆ ನಿಂತಿದೆ. ಈ ನಡುವೆ, ಈ ರೀತಿಯ ಪ್ರಚೋದನಾತ್ಮಕ ಸಂದೇಶಗಳನ್ನು ಹಂಚಿಕೊಳ್ಳಬೇಡಿ. ಹೆಚ್ಚಿನ ಮಾಹಿತಿ ಬೇಕಿದ್ದರೆ ದೇವಸ್ಥಾನದ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಎಂದು ಮರ್ಶಿದಾಬಾದ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಳಿ ದೇವಾಲಯಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ದೇವಾಲಯ ಸುಟ್ಟಿದ್ದು, ಮುಸ್ಲೀಮರು ದೇವಸ್ಥಾನವನ್ನು ದ್ವಂಸ ಮಾಡಿದ್ದಾರೆ ಎಂಬ ಬಿಜೆಪಿ ನಾಯಕರ ವಾದ ಸುಳ್ಳಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...