Homeಮುಖಪುಟವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ ಸದಸ್ಯರ ದೂರಿನ ಆಧಾರದ ಮೇಲೆ ಓಡಿಸ್ಸಾದ ಕಟಕ್ ಗ್ರಾಮದ 42 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರ ತಂಡ ಬಂಧಿಸಿ ವಿಚಾರಣೆಗೆ ತೆಗೆದುಕೊಂಡಿದೆ. ಈ ವ್ಯಕ್ತಿಯ ದೂರವಾಣಿ ಸಂಖ್ಯೆಯಿಂದ ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ದೂರು ನೀಡಲಾಗಿತ್ತು.

ಭುವನೇಶ್ವರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಕಟಕ್‌ನ ಸಲೆಪರ್ ಬಳಿಯ ಕುಸಂಬಿ ಗ್ರಾಮದ ನಿವಾಸಿ ಸಯೀದ್ ಹಸನ್ ಅಹ್ಮದ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507, 153 ಎ, 124 ಎ ಮತ್ತು 504 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವುಗಳಲ್ಲಿ, ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

PC: The Wire

ಜುಲೈ 10 ರಂದು ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸಿಂಘವಾಲಿ ಅಹಿರ್ ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಕುಲದೀಪ್ ಪಾಂಚಾಲ್ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ, ಪೊಲೀಸರಿಂದ ಭದ್ರತೆ  ಕೋರಿದ್ದರು. ಈಗ ಇದೇ ದೂರವಾಣಿ ಸಂಖ್ಯೆ ಅಹ್ಮದ್‌ಗೆ ಸೇರಿದ್ದು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ  ಕರೆದೊಯ್ಯಲಾಗಿದೆ.

ಸಲೆಪುರ್ ಮಾರುಕಟ್ಟೆಯಲ್ಲಿ ಟಾರ್ಚ್ ಮತ್ತು ಪ್ಲಾಸ್ಟಿಕ್ ವಸ್ತುಗಳ ಸಣ್ಣ ಅಂಗಡಿಯನ್ನು ಹೊಂದಿರುವ ಅಹ್ಮದ್, ಸೋಷಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ವಿರುದ್ಧ “ಅವಹೇಳನಕಾರಿ ಹೇಳಿಕೆಗಳನ್ನು” ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಯುಪಿಯ ಬಾಗ್‌ಪತ್ ಜಿಲ್ಲೆಯ ಇಬ್ಬರು ಪೊಲೀಸರ ತಂಡ ಓಡಿಸ್ಸಾದ ಸ್ಥಳೀಯ ಪೊಲೀಸರ ಸಹಾಯದಿಂದ ಅಹ್ಮದ್‌ನನ್ನು ಬಂಧಿಸಿ, ತದನಂತರ ಆತನನ್ನು ವಿಚಾರಣೆಗೆ ಕೋರಿ ಕಟಕ್‌ನಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಮುಂದೆ ಹಾಜರುಪಡಿಸಿತು. ಸಿಜೆಎಂ ಆರೋಪಿಯನ್ನು ಸಲೆಪುರ್‌ನ ಜೆಎಂಎಫ್‌ಸಿ ಮುಂದೆ ಹಾಜರುಪಡಿಸಲು ಹೇಳಿತ್ತು. ಜೆಎಂಎಫ್‌ಸಿ ನ್ಯಾಯಾಲಯ ಯುಪಿ ಪೊಲೀಸರಿಗೆ ಅಹ್ಮದ್‌ಗೆ ನಾಲ್ಕು ದಿನಗಳ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಯುಪಿ ಪೊಲೀಸರ ಹೆಚ್ಚಿನ ತನಿಖೆಯ ನಂತರ ಅಹ್ಮದ್ ವಿರುದ್ಧ ಐಪಿಸಿಯ 153 ಎ, 124 ಎ ಮತ್ತು 504 ಸೆಕ್ಷನ್ ಅಡಿಯಲ್ಲಿ ಆರೋಪಗಳನ್ನು ಸೇರಿಸಲಾಗಿದೆ ಎಂದು ಸಲೆಪುರ್ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಝಾರ್ನಾ ಪ್ರಧಾನ್ ಹೇಳಿದ್ದಾರೆ.

ಇದನ್ನೂ ಓದಿ: ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ಆದರೆ ಅಹ್ಮದ್ ಅವರ ತಂದೆ, ನಿವೃತ್ತ ಶಾಲಾ ಶಿಕ್ಷಕ ಸೈಯದ್ ರಹೀದ್ ಅಹ್ಮದ್, ಪಂಚಲ್ ಅವರ ದೂರಿನಲ್ಲಿ ಉಲ್ಲೇಖಿಸಿರುವ ಮೊಬೈಲ್ ಸಂಖ್ಯೆ ಅವರ ಮಗನಿಗೆ ಸೇರಿದೆ, ಆದರೆ ತನ್ನ ಮಗ ನಿರಪರಾಧಿ ಎಂದು ಹೇಳಿದ್ದಾರೆ. ಅವರು ಯಾರಿಗೂ ಬೆದರಿಕೆ ಹಾಕಿಲ್ಲ. ನಮ್ಮ ಪ್ರದೇಶದಲ್ಲಿ ನನ್ನ ಮಗನ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಬಾಗ್‌ಪತ್ ಮತ್ತು ಸಲೆಪುರ್ ಪರಸ್ಪರ ಎಷ್ಟು ದೂರವಿದೆ ಎಂದು ಯೋಚಿಸಿ ಎಂದಿದ್ದಾರೆ.

ಇನ್ನು ಆಶ್ಚರ್ಯಕರ ಸಂಗತಿಯೆಂದರೆ, ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ಗಮನಹರಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಕಟಕ್ ಪೊಲೀಸ್ ಅಧೀಕ್ಷಕ (ಗ್ರಾಮೀಣ), ಬಿ. ಜುಗಲ್ ಕಿಶೋರ್ ಅವರು ಅಹ್ಮದ್ ವಿರುದ್ಧದ ಪ್ರಕರಣದ ವಿವರಗಳನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಯುಪಿ ಪೊಲೀಸರು ಬಂಧಿಸಿರುವ ಅಹ್ಮದ್ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾವುದೇ ದೊಡ್ಡ ದೂರುಗಳು ಬಂದಿಲ್ಲ ಎಂದು ತಿಳಿದುಬಂದಿದೆ. ಅವರ ಮುಸ್ಲಿಂ ಕುಟುಂಬವು ಈ ಪ್ರದೇಶದಲ್ಲಿ ಹೆಸರಾಂತ ಕುಟುಂಬವಾಗಿದೆ. ಅಹ್ಮದ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆ ಇಲ್ಲ ಎಂದು ಸಲೇಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಿಹಾರ್ ಮಲ್ಲಿಕ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಸಾಮಾಜಿಕ ಕಾರ್ಯಕರ್ತ ಬಿಡ್ಯುತ್ ಮೊಹಂತಿ ಅವರು ಅಹ್ಮದ್ ಅವರ ಬಂಧನವನ್ನು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣ ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ 2015 ರಲ್ಲಿ ದೆಹಲಿ ಮತ್ತು ಒಡಿಶಾ ಪೊಲೀಸರ ಜಂಟಿ ತಂಡವು 37 ವರ್ಷದ ಮುಸ್ಲಿಂ ಪಾದ್ರಿಯನ್ನು ಅಲ್-ಖೈದಾದೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಬಂಧಿಸಿತ್ತು ಎಂಬುದು ಹಲವರಿಗೆ ನೆನಪಿದೆ. ಅರೇಬಿಕ್ ಮತ್ತು ಇಸ್ಲಾಮಿಕ್ ಅಧ್ಯಯನದಲ್ಲಿ ಪಿಎಚ್‌ಡಿ ಪದವಿ ಪಡೆದ ಮೌಲಾನಾ ಅಬ್ದುಲ್ ರೆಹಮಾನ್ ಅವರನ್ನು ಕಟಕ್‌ನ ಜಗತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಸ್ಚಿಮಾ ಕಚ್ಚಾ ಗ್ರಾಮದಿಂದ ಬಂಧಿಸಲಾಗಿತ್ತು.

ಈಗ ಸಯೀದ್ ಹಸನ್ ಅಹ್ಮದ್ ಬಂಧನ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಸ್ಥಳೀಯ ಪೊಲೀಸರ ಪ್ರಕಾರ ಆತನ ವಿರುದ್ಧ ಈವರೆಗೂ ಯಾವುದೇ ಪ್ರಕರಣಗಳಿಲ್ಲ. ನನ್ನ ಮಗ ನಿರಪರಾಧಿ ಎಂದು ತಂದೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಉತ್ತರ ಪ್ರದೇಶ ಪೊಲೀಸರು ಮಾತ್ರ ಸೆಕ್ಷನ್ 507 ಹಾಕಿದ್ದಾರೆ. ನಂತರ ಸೆಕ್ಷನ್ 124 ಎ ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣವನ್ನು ಅಹ್ಮದ್ ಮೇಲೆ ಹಾಕಿದ್ದಾರೆ.


ಇದನ್ನೂ ಓದಿ: ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...