Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...