Homeಮುಖಪುಟ"ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)" ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

“ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು" ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

- Advertisement -
- Advertisement -

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಸೇರಿದಂತೆ ಇತರೆ ಘೋಷಣೆಗಳೊಂದಿಗೆ ಟೀಶರ್ಟ್ ತಯಾರಿಸುತ್ತಿರುವ ತಿರುಪ್ಪೂರಿನ ಬಟ್ಟೆ ತಯಾರಕರಿಗೆ ಕಳೆದ ಕೆಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತಿರುಪ್ಪೂರಿನ ವೀರಪಾಂಡಿಯಲ್ಲಿ ಕಳೆದ ಐದು ವರ್ಷಗಳಿಂದ ಗಾರ್ಮೆಂಟ್ ವ್ಯವಹಾರದಲ್ಲಿ ತೊಡಗಿರುವ ಬಿ ಕಾರ್ತಿಕೇಯನ್, “ನಾನು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಮತ್ತು ಕಾರ್ಪೊರೇಟ್ ಆದೇಶದ ಮೇರೆಗೆ ಟಿ-ಶರ್ಟ್‌ಗಳನ್ನು ಮಾರಾಟ ಮಾಡುತ್ತಿದ್ದೇನೆ. ಕಳೆದ ವಾರ, ಟಿ-ಶರ್ಟ್ ಮತ್ತು ಘೋಷಣೆಯ ಬಗ್ಗೆ ತೂತುಕುಡಿ ಸಂಸದ ಕನಿಮೋಳಿ ಅವರ ಕಚೇರಿಯಿಂದ ನನಗೆ ಕರೆ ಬಂದಿತು. ಅವರು ನೀಡಿದ ಘೋಷಣೆಯನ್ನು ನಾನು ಸ್ವೀಕರಿಸಿದೆ. ಅದು ವಿಶಿಷ್ಟ ಮತ್ತು ಶಕ್ತಿಯುತವಾಗಿತ್ತು” ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

“ನಾ ತಮಿಳು ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ) ಮತ್ತು ‘ಹಿಂದಿ ತೆರಿಯಾದು ಪೊಡಾ’ (ಹಿಂದಿ ಗೊತ್ತಿಲ್ಲ, ಹೋಗೋ) ಎಂಬ ಘೋಷಣೆಗಳು ನನ್ನ ಆಸಕ್ತಿಯನ್ನು ಸೆಳೆದವು. ಆದ್ದರಿಂದ, ನಾವು ಟಿ-ಶರ್ಟ್ ಮೇಲೆ ಈ ಘೋಷಣೆಯ ಮುದ್ರಣವನ್ನು ಹಾಕಿಸಿದ್ದೇವೆ. ಕೆಲವೇ ದಿನಗಳಲ್ಲಿ, ಇದು ಚೆನ್ನೈ ಮತ್ತು ತಮಿಳುನಾಡಿನಾದ್ಯಂತ ಭಾರಿ ಮನ್ನಣೆ ಪಡೆಯಿತು. ಹಲವಾರು ಸಿನಿ ಸೆಲೆಬ್ರಿಟಿಗಳು ಮತ್ತು ಉನ್ನತ ವ್ಯಕ್ತಿಗಳು ಟಿ-ಶರ್ಟ್ ಅನ್ನು ತೆಗೆದುಕೊಂಡು ಪ್ರಚಾರ ಮಾಡಿದರು. ಇದರ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಸ್ನೇಹಿತರು ಮತ್ತು ಸಂಬಂಧಿಕರು ಈ ಕೆಲಸವನ್ನು ಮೆಚ್ಚಿಕೊಳ್ಳುವುದರೊಂದಿಗೆ, ಹಲವರಿಂದ ಆರ್ಡರ್‌ ಬರಲು ಆರಂಭವಾಯಿತು. ಆದ್ದರಿಂದ, ನಾನು ಟಿ-ಶರ್ಟ್ ಮಾರಾಟ ಮಾಡಲು ನಿರ್ಧರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಈಗ ಜಗತ್ತಿನಾದ್ಯಂತ ಆರ್ಡರ್‌ ಬರಲು ಪ್ರಾರಂಭವಾಗಿದೆ” ಎಂದು ಹೇಳಿದರು.

“ನಾನು ನನ್ನ ಮೊಬೈಲ್ ಸಂಖ್ಯೆ ಮತ್ತು ಟಿ-ಶರ್ಟ್‌ನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮ‌ಗಳಲ್ಲಿ ಪೋಸ್ಟ್ ಮಾಡಿದಾಗ, ನನಗೆ ಫೋನ್‌ನಲ್ಲಿ ಬೆದರಿಕೆಗಳು ಮತ್ತು ನಿಂದನೆಗಳು ಬರಲು ಆರಂಭವಾಯಿತು. ಅನೇಕ ಕರೆಗಳು ದುಬೈ ಮತ್ತು ಸಿಂಗಾಪುರದ ಜನರಿಂದ ಬಂದವು. ನಾನು, ’ಕೇವಲ ಭಾಷೆ ಹೇರಿಕೆಯನ್ನು ವಿರೋಧಿಸುವ ಉಡುಪು ತಯಾರಕ” ಎಂದು ವಿವರಿಸಿದರೂ ಅವರು ನನ್ನನ್ನು ನಿಂದಿಸಿದ್ದರು” ಎಂದು ಅವರು ಸ್ವೀಕರಿಸಿದ ಬೆದರಿಕೆಗಳ ಬಗ್ಗೆ ವಿವರಿಸಿದರು.

“ಆದ್ದರಿಂದ, ನಾನು ಮೌನವಾಗಿರಲು ನಿರ್ಧರಿಸಿ, ಹೊಸ ಆರ್ಡರ್‌ ಬಂದಾಗಲೆಲ್ಲಾ, ’ನಾನು ಉಡುಪು ತಯಾರಕನಲ್ಲ’ ಎಂದು ನಟಿಸಿದೆ. ಆದರೆ ನನ್ನ ಸ್ನೇಹಿತರು ನನಗೆ ಬಲತುಂಬಿ ಪ್ರೋತ್ಸಾಹಿಸಿದರು. ನಂತರ ನಾನು ಎಲ್ಲಾ ಆರ್ಡರ್‌ಗಳನ್ನು ಸ್ವೀಕರಿಸಲು ನಿರ್ಧರಿಸಿದ್ದೇನೆ. ಆದರೆ, ಬೆದರಿಕೆ ಕರೆಗಳ ಬಗ್ಗೆ ಪೊಲೀಸ್ ದೂರು ನೀಡಲು ಯೋಚಿಸಿಲ್ಲ. ಅವುಗಳನ್ನು ಎದುರಿಸಲು ನಾನು ಸಿದ್ಧ” ಎಂದು ಹೇಳಿದರು.

ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ಹಿಂದಿ ದಿವಸ್ ವಿರುದ್ಧ ಅನೇಕ ರಾಜ್ಯಗಳು ದನಿಯೆತ್ತುತ್ತಿವೆ. ಕರ್ನಾಟಕದಲ್ಲಿಯೂ ಕೂಡ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಧನಂಜಯ್ ಧರಿಸಿರುವ ಟೀಶರ್ಟ್ ವೈರಲ್ ಆಗುತ್ತಿದ್ದು, ಅದರಲ್ಲಿ “ಕನ್ನಡಿಗರಿಗೆ ಕನ್ನಡ ಭಾಷೆಯೇ ರಾಷ್ಟ್ರೀಯ ಭಾಷೆ” ಎಂದು ಅದರಲ್ಲಿ ಬರೆದಿದೆ.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...