Homeಮುಖಪುಟ'ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ': ಪತ್ರಬರೆದ IRS ಅಧಿಕಾರಿ

‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

"ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ"

- Advertisement -
- Advertisement -

ತಮಿಳುನಾಡಿನ ಭಾರತೀಯ ಕಂದಾಯ ಸೇವೆಯ (IRS) ಅಧಿಕಾರಿಯೊಬ್ಬರು, ಹಿಂದಿ ಗೊತ್ತಿಲ್ಲದವರ ಮೇಲಿನ ಹಿಂದಿ ಹೇರಿಕೆಯು, ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ ಎಂದು ತನ್ನ ಉನ್ನತ ಅಧಿಕಾರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಬಿ.ಬಾಲಮುರುಗನ್ ಅವರನ್ನು ಕಳೆದ ವರ್ಷ ಚೆನ್ನೈನಲ್ಲಿರುವ ಜಿಎಸ್‌ಟಿ ಕಛೇರಿಯ ಹಿಂದಿ ಸೆಲ್‌ಗೆ ವರ್ಗ ಮಾಡಲಾಗಿತ್ತು. ಈಗ ಅವರು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಗೆ (CBIC) ಪತ್ರವೊಂದನ್ನು ಬರೆದಿದ್ದು, ಅದರಲ್ಲಿ, “ಹಿಂದಿ ಸೆಲ್‌ಗೆ ನೇಮಿಸಿರುವ ಅಧಿಕಾರಿಗೆ ಹಿಂದಿಯನ್ನು ಓದಲು-ಬರೆಯಲು ಬರಬೇಕು. ಅಲ್ಲಿ ಕೆಲಸ ಮಾಡಲು ಕನಿಷ್ಟ ಇಚ್ಚೆಯಾದರೂ ಇರಬೇಕು ಎಂಬುದು ನನ್ನ ವಿನಮ್ರ ಸಲಹೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಆಗಸ್ಟ್‌ 9 ರಂದು ಬರೆದಿರುವ ಪತ್ರದಲ್ಲಿ, “ಹಿಂದಿ ಸೆಲ್‌ನಲ್ಲಿನ ಕೆಲಸದ ಅಧಿಕೃತ ಸಂವಹನದಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವುದನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಉತ್ತೇಜಿಸುವುದಾಗಿರುತ್ತದೆ. ನನಗೆ ಹಿಂದಿಯಲ್ಲಿ ABCD ಯೂ ಗೊತ್ತಿಲ್ಲ. ಹಾಗಾಗಿ ಹಿಂದಿ ಕೋಶದಲ್ಲಿ ಕೆಲಸ ಮಾಡಲು ಆಸಕ್ತಿ ಇಲ್ಲ. ನನ್ನನ್ನು ಹಿಂದಿ ಕೋಶದಲ್ಲಿ ಪೋಸ್ಟಿಂಗ್ ಮಾಡುವುದು ನನ್ನ ಮೇಲಿನ ಹಿಂದಿ ಹೇರಿಕೆಯಲ್ಲದೇ ಮತ್ತೇನೂ ಅಲ್ಲ. ಇದು ಬ್ರಾಹ್ಮಣನಿಗೆ ಬೈಬಲ್ ಅಥವಾ ಕುರಾನ್ ಕೊಟ್ಟು, ಕ್ರಿಶ್ಚಿಯನ್ ಅಥವಾ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಲು ನಿರ್ದೇಶಿಸುವಂತಿದೆ” ಎಂಬುದಾಗಿ ಹೇಳಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

“ಹಿಂದಿ ತಿಳಿದಿರುವ ಮತ್ತು ಹಿಂದಿ ಸೆಲ್‌ನಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಧಿಕಾರಿಗಳನ್ನು ಮಾತ್ರ ಅಲ್ಲಿಗೆ ನೇಮಿಸಬೇಕು ಎಂದು, CBIC ಅಧ್ಯಕ್ಷರು ಮತ್ತು ಸಿಬಿಐಸಿಯ ಎಲ್ಲಾ ವಿಭಾಗದ ಮುಖ್ಯಸ್ಥರಿಗೆ ಸೂಚನೆ ನೀಡಬೇಕು ಎಂದು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

“ನಾವು ಸಹಿ ಮಾಡುವ ಖಡತಗಳಲ್ಲಿ ಏನು ಬರೆದಿದೆ ಎಂದು ಅರ್ಥಮಾಡಿಕೊಳ್ಳುವುದಕ್ಕೂ ನಮಗೆ ಸಾಧ್ಯವಿಲ್ಲ. ಇಲ್ಲಿ ಕೆಲಸ ಮಾಡುವ ಅರ್ಧದಷ್ಟು ಜನ ಹಿಂದಿ ಬಲ್ಲವರೇ ಆಗಿದ್ದಾರೆ. ಇದು ನ್ಯಾಯಯೋಚಿತವೇ? ಹಿಂದಿ ಹೇರಿಕೆಯ ರಾಜಕೀಯಕ್ಕೆ ಇಳಿಯಲು ಇಷ್ಟವಿಲ್ಲದಿದ್ದರೂ, ಒಬ್ಬ ಅಧಿಕಾರಿಯನ್ನು ಇದಕ್ಕೆ ಒಳಪಡಿಸುವುದು ಅನ್ಯಾಯವಾಗಿದೆ. ನಾನು CBICಯಿಂದ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ” ಎಂದು ಬಾಲಮುರುಗನ್ ಹೇಳಿದ್ದಾರೆ.

CBIC, ಎಲ್ಲಾ IRS ಅಧಿಕಾರಿಗಳ ಕೇಡರ್ ನಿಯಂತ್ರಣ ಪ್ರಾಧಿಕಾರವಾಗಿದ್ದು, ಹಿಂದಿ ಸೆಲ್, ಹಿಂದಿ ಅನುಷ್ಠಾನದ ಬಗ್ಗೆ ತ್ರೈಮಾಸಿಕ ಸಂಖ್ಯಾಶಾಸ್ತ್ರೀಯ ವರದಿಗಳನ್ನು ಸಂಗ್ರಹಿಸುತ್ತದೆ. ಹಾಗಾಗಿ ತನ್ನ ಅಧಿಕೃತ ಕೆಲಸದಲ್ಲಿ ಹಿಂದಿ ಭಾಷೆಯ ಬಳಕೆಯು ಅಗತ್ಯವಾಗಿದೆ.


ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...