Homeಮುಖಪುಟಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದಿದ್ದ ದೆಹಲಿ ಹೈಕೋರ್ಟ್ ಆಗಸ್ಟ್ 29 ರಂದು ಕಾರ್ಯಕ್ರಮದ ಮೇಲಿನ ತಡೆಯನ್ನು ವಾಪಾಸು ಪಡೆಯಲು ನಿರಾಕರಿಸಿತ್ತು.

- Advertisement -
- Advertisement -

ದೆಹಲಿ ಹೈಕೋರ್ಟ್ ತಡೆಹಿಡಿದಿದ್ದ ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮ “ಯುಪಿಎಸ್ಸಿ ಜಿಹಾದ್” ಕಾರ್ಯಕ್ರಮ ಪ್ರಸಾರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕಾರ್ಯಕ್ರಮವು ಯಾವುದೇ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಚಾನೆಲ್‌ಗೆ ನಿರ್ದೇಶನ ನೀಡಿದ್ದು, ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹೇಳಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಸುದರ್ಶನ ಟಿವಿಯ ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ವಿವಾದಾತ್ಮಕ ಪ್ರೋಮೋವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದರು.

ಕಾರ್ಯಕ್ರಮದ ಪ್ರೊಮೋ ಪ್ರಸಾರವಾದ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಹಳೆ ವಿದ್ಯಾರ್ಥಿಗಳು ಚಾನೆಲ್ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ಮಾಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಪೀಠವು ಸುದರ್ಶನ್ ಟಿವಿ ಕಾರ್ಯಕ್ರಮವನ್ನು ಪ್ರಸಾರ ಮಾಡುವುದನ್ನು ತಡೆಹಿಡಿದಿತ್ತು.

ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ (ರೆಗ್ಯುಲೇಷನ್ಸ್) ಕಾಯ್ದೆ 1995 ರ ಅಡಿಯಲ್ಲಿ ಕಾರ್ಯಕ್ರಮದ ಪ್ರೊಮೋ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ಹೇಳಿತ್ತು.

ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ.

ಹೈಕೋರ್ಟ್ ತನ್ನ ಆದೇಶದಲ್ಲಿ, “ನ್ಯಾಯಾಲಯದ ಗ್ರಹಿಕೆಯ ಆಧಾರದ ಮೇಲೆ ಕಾರ್ಯಕ್ರಮವು ನಿಮಯಗಳನ್ನು ಉಲ್ಲಂಘಿಸುತ್ತದೆಯೇ ಇಲ್ಲವೋ ಎಂಬುದನ್ನು ತೀರ್ಮಾನಿಸಿ ಕಾರ್ಯಕ್ರಮ ಪ್ರಸಾರಕ್ಕೆ ಅನುಮತಿ ನೀಡಬೇಕೆ ಬೇಡವೇ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿತ್ತು.

ನ್ಯಾಯಾಲಯದ ನಿರ್ದೇಶನಗಳಿಗೆ ಅನುಗುಣವಾಗಿ ಸಚಿವಾಲಯವು ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚಾವಂಕೆ ಅವರಿಗೆ ನೋಟಿಸ್ ನೀಡಿತ್ತು. ಆದರೆ ಚಾನೆಲ್ ಕಾರ್ಯಕ್ರಮವನ್ನು ಪ್ರಸಾರ ಮಾಡುವ ಮೊದಲು ಸಚಿವಾಲಯವು ಕಾರ್ಯಕ್ರಮವನ್ನು ಸೆನ್ಸಾರ್ ಮಾಡಲು ಸಾಧ್ಯವಿಲ್ಲ ಎಂದು ಚಾನೆಲ್ ವಾದಿಸಿದೆ.

ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳಲ್ಲಿ ಸುಮಾರು 50% ಅಭ್ಯರ್ಥಿಗಳು ಮುಸ್ಲಿಮೇತರಾಗಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ, ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹಾಸ್ಟೆಲ್ ಸೌಲಭ್ಯದೊಂದಿಗೆ ಉಚಿತ ತರಬೇತಿಯನ್ನು ನೀಡುತ್ತದೆ. ಈ ಸೌಲಭ್ಯವು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತವಾಗಿದೆ. ಮಹಿಳಾ ಅಭ್ಯರ್ಥಿಗಳು ಸಹ ಈ ಅವಕಾಶವನ್ನು ಪಡೆಯಲು ಅರ್ಹರಾಗಿದ್ದಾರೆ.

ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಕೇಂದ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಯು ಮತ್ತು ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ ಸೇರಿದಂತೆ 40 ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ಹಿಂದಿಕ್ಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಥಮ ಸ್ಥಾನ ಪಡೆದಿದೆ.


ಇದನ್ನೂ ಓದಿ: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...