Homeಮುಖಪುಟದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ದೆಹಲಿ ಗಲಭೆಯ ಕುರಿತು ನ್ಯಾಯಯುತ ತನಿಖೆ ನಡೆಸುವಂತೆ ದೆಹಲಿ ಪೊಲೀಸ್ ಕಮಿಷನರ್‌ ಎಸ್‌.ಎನ್.ಶ್ರೀವಾಸ್ತವ ಅವರಿಗೆ ದೇಶದಾದ್ಯಂತ ಇರುವ 9 ಜನ ಮಾಜಿ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಒಂಬತ್ತು ಮಾಜಿ ಐಪಿಎಸ್ ಅಧಿಕಾರಿಗಳು ‘Constitutional Conduct Group’ನ  ಭಾಗವಾಗಿದ್ದಾರೆ. ಇದರ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ದನಿಯೆತ್ತುತ್ತಾರೆ.

ಪತ್ರದಲ್ಲಿ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ನಿಸ್ಪಕ್ಷಪಾತ ಮತ್ತಯ ನ್ಯಾಯಯುತವಾದ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

“ಈ ಗಲಭೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯದಲ್ಲಿ ಸಲ್ಲಿಸಿದ ತನಿಖೆಗಳು ಮತ್ತು ಚಲನ್‌ಗಳು ಪಕ್ಷಪಾತಿ ಮತ್ತು ರಾಜಕೀಯ ಪ್ರೇರಿತ ಎಂಬುದು ಭಾರತೀಯ ಪೊಲೀಸರ ಇತಿಹಾಸದಲ್ಲಿ ನಿಜಕ್ಕೂ ದುಃಖದ ದಿನ ಎಂದು ನಾವು ಹೇಳಲು ಬಯಸುತ್ತೇವೆ. ಕಾನೂನಿನ ನಿಯಮ ಮತ್ತು ನಮ್ಮ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ, ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತರಾಗಿರುವವರಿಗೆ ಇದು ನೋವುಂಟು ಮಾಡುತ್ತದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

“ನಿಮ್ಮಲ್ಲಿರುವ ವಿಶೇಷ ಆಯುಕ್ತರೊಬ್ಬರು, ತಮ್ಮ ಸಮುದಾಯಕ್ಕೆ ಸೇರಿದ ಕೆಲವು ಗಲಭೆಕೋರರ ಬಂಧನದಿಂದ ಹಿಂದೂಗಳಿಗೆ ಅಸಮಾಧಾನ ಉಂಟಾಗುತ್ತದೆ ಎಂಬ ಕಾರಣಕ್ಕೆ, ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರುವುದರ ಬಗ್ಗೆ ನಮಗೆ ವಿಷಾದವಿದೆ. ಪೊಲೀಸ್ ನಾಯಕತ್ವದಲ್ಲಿನ ಬಹುಸಂಖ್ಯಾತರ ಪರವಾದ ಮನೋಭಾವವು, ಹಿಂಸಾಚಾರಕ್ಕೆ ಒಳಗಾದವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ಪಕ್ಷಪಾತ ಮಾಡುತ್ತದೆ. ಹಾಗಾಗಿ ಬಹುಸಂಖ್ಯಾತ ಸಮುದಾಯಕ್ಕೆ ಸೇರಿದ ಮತ್ತು ಹಿಂಸಾಚಾರದಲ್ಲಿ ಭಾಗಿಯಾದ ನಿಜವಾದ ಅಪರಾಧಿಗಳು ವಿನಾಯಿತಿ ಪಡೆಯುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಗಳಲ್ಲಿ ಮಾತನಾಡಿದ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲರನ್ನೂ ನಾವು ಹೆಚ್ಚು ನೋಯಿಸುತ್ತಿದ್ದೇವೆ. ಸಂವಿಧಾನದ ಪ್ರಕಾರ, ಅವರು ತಮ್ಮ ವಾಕ್ ಸ್ವಾತಂತ್ರ್ಯ ಮತ್ತು ಶಾಂತಿಯುತ ಪ್ರತಿಭಟನೆಯ ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಿದ್ದರು. ದೃಢವಾದ ಸಾಕ್ಷ್ಯಾಧಾರಗಳನ್ನು ಅವಲಂಬಿಸದೇ ನಡೆಯುವ ತನಿಖೆಗಳು ನ್ಯಾಯಯುತ ತನಿಖೆಯ ತತ್ವಗಳನ್ನು ಉಲ್ಲಂಘಿಸುತ್ತದೆ. ಸಿಎಎ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ನಾಯಕರು ಮತ್ತು ಕಾರ್ಯಕರ್ತರನ್ನು ಒಳಗೊಳ್ಳುವಾಗ, ಹಿಂಸಾಚಾರವನ್ನು ಪ್ರಚೋದಿಸಿದ ಮತ್ತು ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಎಲ್ಲರನ್ನು ಗಾಳವಾಗಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಇಂತಹ ತನಿಖೆಯು, ಪ್ರಜಾಪ್ರಭುತ್ವ, ನ್ಯಾಯ ಮತ್ತು ಸಂವಿಧಾನದ ಮೇಲೆ ಜನರು ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಒಂದು ಕ್ರಮಬದ್ಧ ಸಮಾಜದ ಅಡಿಪಾಯವನ್ನು ಅಲ್ಲಾಡಿಸಿ, ಕಾನೂನು ಸುವ್ಯವಸ್ಥೆಯ ವಿಘಟನೆಗೆ ಕಾರಣವಾಗುವ ಅಪಾಯಕಾರಿ ಚಿಂತನೆಯಾಗಿದೆ” ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

“ಆದ್ದರಿಂದ, ಎಲ್ಲಾ ಗಲಭೆ ಪ್ರಕರಣಗಳನ್ನು ನ್ಯಾಯಯುತವಾಗಿ ಮತ್ತು ಅಪರಾಧ ತನಿಖೆಯ ಉತ್ತಮ ತತ್ವಗಳ ಆಧಾರದ ಮೇಲೆ, ಯಾವುದೇ ಪಕ್ಷಪಾತವಿಲ್ಲದೆ, ಬಲಿಪಶುಗಳಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಹಾಗೂ ಕಾನೂನಿನ ನಿಯಮವನ್ನು ಎತ್ತಿಹಿಡಿಯಲು ನಾವು ಮನಃಪೂರ್ವಕವಾಗಿ ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ಕೋರಲಾಗಿದೆ.

ಶಫಿ ಆಲಂ (ಮಾಜಿ ಮಹಾನಿರ್ದೇಶಕರು, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ), ಕೆ.ಸಲೀಮ್ ಅಲಿ (ಸಿಬಿಐ ಮಾಜಿ ವಿಶೇಷ ನಿರ್ದೇಶಕರು), ಮೊಹಿಂದರ್‌ಪಾಲ್ ಆಲಾಕ್ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಪಂಜಾಬ್), ಎ.ಎಸ್. ದುಲಾತ್ (ಕಾಶ್ಮೀರದ ಮಾಜಿ ಒಎಸ್‌ಡಿ, ಪ್ರಧಾನ ಮಂತ್ರಿ ಕಚೇರಿ), ಅಲೋಕ್ ಬಿ. ಜನರಲ್ ಆಫ್ ಪೊಲೀಸ್, ಸಿಕ್ಕಿಂ), ಅಮಿತಾಬ್ ಮಾಥುರ್ (ವಿಮಾನಯಾನ ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಮತ್ತು ಕ್ಯಾಬಿನೆಟ್ ಸಚಿವಾಲಯದ ಮಾಜಿ ವಿಶೇಷ ಕಾರ್ಯದರ್ಶಿ), ಅವಿನಾಶ್ ಮೋಹನನೆ (ಮಾಜಿ ಪೊಲೀಸ್ ಮಹಾನಿರ್ದೇಶಕ, ಸಿಕ್ಕಿಂ), ಪಿಜಿಜೆ ನಂಬೂತಿರಿ (ಮಾಜಿ ಪೊಲೀಸ್ ಮಹಾನಿರ್ದೇಶಕರು, ಗುಜರಾತ್) ಮತ್ತು ಎ.ಕೆ. ಸಮಂತಾ (ಮಾಜಿ ಪೊಲೀಸ್ ಮಹಾನಿರ್ದೇಶಕರು ಪಶ್ಚಿಮ ಬಂಗಾಳ) ಈ ಪತ್ರಕ್ಕೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ದೆಹಲಿ ಗಲಭೆಯ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಗಣ್ಯರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...