Homeಮುಖಪುಟಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ: ಕೇಂದ್ರ

- Advertisement -
- Advertisement -

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸಲು ಇಂದು ಸುಪ್ರೀಂನಲ್ಲಿ ವಿಚಾರಣೆ ನಡೆಯಲಿದೆ. ಇದಕ್ಕೂ ಮೊದಲೇ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿ “ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಹೇಳಿದೆ.

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿದಂತೆ, ವಾಕ್‌ಸ್ವಾತಂತ್ರ್ಯ ಮತ್ತು ಪತ್ರಿಕೋದ್ಯಮವನ್ನು ಸಮತೋಲನಗೊಳಿಸುವ ಸಲುವಾಗಿ ಈಗಾಗಲೇ ನಿಗದಿತ ಚೌಕಟ್ಟು, ಶಾಸನಬದ್ದ ನಿಬಂಧನೆಗಳ ಅಡಿಯಲ್ಲಿ ನಿಯಂತ್ರಿಸಲಾಗಿದೆ” ಎಂದು ಕೇಂದ್ರ ಹೇಳಿದೆ.

ಮಾರ್ಗಸೂಚಿಗಳನ್ನು ನಿರ್ಧರಿಸುವುದಕ್ಕೆ ಸಹಾಯ ಮಾಡುವ ಅಮಿಕಸ್ ಕ್ಯೂರಿ (Amicus Curiae – a friend of the court)ಯನ್ನು ಅಥವಾ ಸಮಿತಿಯೊಂದನ್ನು ರಚಿಸುವಂತೆ ನ್ಯಾಯಾಲಯವನ್ನು ಕೇಂದ್ರ ಸರ್ಕಾರ ಒತ್ತಾಯಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಖಾಸಗಿ ಚಾನೆಲ್, ಸುದರ್ಶನ್ ಟಿ.ವಿ ವಿರುದ್ಧದ ಪ್ರಕರಣಕ್ಕೆ ಕೇಂದ್ರದ ಈ ಅಫಿಡವಿಟ್ ಸಂಬಂಧಿಸಿದೆ. “ಮುಸ್ಲಿಮರು ಸರ್ಕಾರಿ ಸೇವೆಗಳಿಗೆ ನುಸುಳುತ್ತಿದ್ದಾರೆ” (ಯುಪಿಎಸ್‌ಸಿ ಜಿಹಾದ್) ಎಂದು ಸುದರ್ಶನ್ ಟಿ.ವಿ ತನ್ನ ಕಾರ್ಯಕ್ರಮದ ಪ್ರೋಮೋವೊಂದನ್ನು ಬಿಡುಗಡೆ ಮಾಡಿ ವಿವಾದಕ್ಕೆ ಹುಟ್ಟುಹಾಕಿತ್ತು.

“ಒಂದು ಸಮುದಾಯವನ್ನು ಗುರಿಯಾಗಿಸಲು ಮತ್ತು ನಿರ್ದಿಷ್ಟ ರೀತಿಯಲ್ಲಿ ಬ್ರಾಂಡ್ ಮಾಡಲು ಸಾಧ್ಯವಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಸಲು, ಪ್ರತಿಷ್ಠೆಯನ್ನು ಹಾಳುಮಾಡಲು, ವ್ಯಕ್ತಿತ್ವಕ್ಕೆ ಮಸಿಬಳಿಯುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಪಾಲು ದೊಡ್ಡದಾಗಿದೆ” ಎಂದು ಪ್ರಕರಣದ ವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸುದರ್ಶನ್ ಟಿ.ವಿ‌ಗೆ ಮಂಗಳವಾರ ಹೇಳಿತ್ತು.

ಇದನ್ನು ಓದಿ: ಸುದರ್ಶನ್ ಟಿವಿಯ ’ಯುಪಿಎಸ್ಸಿ ಜಿಹಾದ್’ ಕಾರ್ಯಕ್ರಮ ಪ್ರಸಾರಕ್ಕೆ ತಡೆ ನೀಡಿದ ಸುಪ್ರೀಂ

ವಿಚಾರಣೆಯ ಸಂಧರ್ಭದಲ್ಲಿ ನ್ಯಾಯಾಧೀಶರೊಬ್ಬರು “ಎಲೆಕ್ಟ್ರಾನಿಕ್ ಮಾಧ್ಯಮದ ಸಮಸ್ಯೆ ಟಿಆರ್‌ಪಿಗಳದ್ದೇ ಆಗಿದೆ, ಇದು ಹೆಚ್ಚು ಹೆಚ್ಚು ಉದ್ರೇಕಗೊಳಿಸಿ ಜನರ ಪ್ರತಿಷ್ಠೆಯನ್ನು ಹಾಳು ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನು ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...