Homeಅಂತರಾಷ್ಟ್ರೀಯಟ್ರಂಪ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು: ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪ

ಟ್ರಂಪ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು: ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪ

ನವೆಂಬರ್‌ನಲ್ಲಿ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಲು ಪ್ರಯತ್ನಿಸುತ್ತಿರುವ ಟ್ರಂಪ್ ವಿರುದ್ಧದ 24ಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪಗಳಲ್ಲಿ ಇದೂ ಒಂದಾಗಿದೆ.

- Advertisement -
- Advertisement -

1997 ರ ಸೆಪ್ಟೆಂಬರ್‌ನಲ್ಲಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಮೇಲೆ ಲೈಂಗಿಕ ಹಲ್ಲೆ ಮಾಡಿದ್ದಾರೆ ಎಂದು ಮಾಜಿ ಮಾಡೆಲ್ ಆಮಿ ಡೋರಿಸ್ ಆರೋಪಿಸಿದ್ದಾರೆ. ಟ್ರಂಪ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ.

ನ್ಯೂಯಾರ್ಕ್‌ನಲ್ಲಿ ನಡೆದ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ತಾನು 24 ವರ್ಷದವಳಿದ್ದಾಗ ಟ್ರಂಪ್ ಆಮಿ ಡೋರಿಸ್ ಮೇಲೆ ಹಲ್ಲೆ ನಡೆಸಿದ್ದರು. ನವೆಂಬರ್‌ನಲ್ಲಿ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಲು ಪ್ರಯತ್ನಿಸುತ್ತಿರುವ ಟ್ರಂಪ್ ವಿರುದ್ಧದ 24ಕ್ಕೂ ಹೆಚ್ಚು ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪಗಳಲ್ಲಿ ಇದೂ ಒಂದಾಗಿದೆ.

2016 ರ ಅಧ್ಯಕ್ಷೀಯ ಚುನಾವಣೆಗೆ ಮುಂಚೆಯೇ, ಟ್ರಂಪ್ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋವೊಂದು ಸೊರಿಕೆಯಾಗಿತ್ತು. ಅದರಲ್ಲಿ, ಟ್ರಂಪ್ ಅವರು ಮಹಿಳೆಯ ಅನುಮತಿಗಾಗಿ ಕಾಯದೆ ಆಕೆಯ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದರ ಕುರಿತು ಮಾತನಾಡಿದ್ದರು. ಇದಾದ ನಂತರ ಅವರು ನೀಡಿದ್ದ ಹೇಳಿಕೆಗೆ ಕ್ಷಮೆಯಾಚಿಸಿದ್ದರು.

ಡೊನಾಲ್ಡ್ ಟ್ರಂಪ್ ತನ್ನ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಕುರಿತು ಸಂಪೂರ್ಣ ವಿವರವನ್ನು ಆಮಿ ಡೋರಿಸ್ ತಿಳಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

ಟ್ರಂಪ್ ತಮ್ಮ ವಕೀಲರ ಮೂಲಕ ಈ ಘಟನೆಯನ್ನು ಬಲವಾಗಿ ನಿರಾಕರಿಸಿದ್ದಾರೆ. ಯುಎಸ್ ಓಪನ್‌ನಲ್ಲಿ ಈ ಘಟನೆ ನಡೆದಿದ್ದರೆ, ಅದಕ್ಕೆ ಅನೇಕ ಸಾಕ್ಷಿಗಳು ಇರುತ್ತಿತ್ತು ಎಂದು ಅವರ ವಕೀಲರು ವಾದಿಸಿದ್ದಾರೆ.

“2016 ರಲ್ಲಿಯೂ ಇಂತಹ ಆರೋಪಗಳು ಬರುತ್ತಿದ್ದುದನ್ನು ಗಮನಿಸಿದ್ದೆ. ಆದರೆ ನನ್ನ ಕುಟುಂಬವನ್ನು ರಕ್ಷಿಸುವ ಸಲುವಾಗಿ ನಾನು ಈ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ ಎಂದು ಹೇಳಿದ್ದರು.

15 ತಿಂಗಳ ಹಿಂದೆ ಆಮಿ ಡೋರಿಸ್, ದಿ ಗಾರ್ಡಿಯನ್ ಜೊತೆ ಮಾತನಾಡಿದ್ದರು. ಆದರೆ ಆ ಸಮಯದಲ್ಲಿ ಸಾರ್ವಜನಿಕವಾಗಿ ಬಹಿರಂಗಗೊಳಿಸಲು ಇಷ್ಟವಿರಲಿಲ್ಲ ಎಂದು ಸ್ಕ್ರಾಲ್.ಇನ್ ತಿಳಿಸಿದೆ.

ಟ್ರಂಪ್ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕಾನೂನು ಸಲಹೆಗಾರ ಜೆನ್ನಾ ಎಲ್ಲಿಸ್, ಡೋರಿಸ್ ಅವರ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ. ಈ ಆಧಾರರಹಿತ ಆರೋಪವು ಖಂಡಿತ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...