Homeಮುಖಪುಟನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಇಲ್ಲ: ಚೆನ್ನೈ ಹೈಕೋರ್ಟ್

ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಇಲ್ಲ: ಚೆನ್ನೈ ಹೈಕೋರ್ಟ್

ಸೂರ್ಯನಂತಹ ಜನರು ನ್ಯಾಯಾಂಗದ ಮೇಲೆ ಟೀಕೆಗಳನ್ನು ಮಾಡುವ ಮೊದಲು ಅದು ನ್ಯಾಯಸಮ್ಮತವೇ ಅಥವಾ ಇಲ್ಲವೇ ಎಂದು ಯೋಚಿಸಬೇಕು ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಕುರಿತು ನಟ ಸೂರ್ಯ ಟೀಕೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಯಾವುದೇ ಪ್ರಕರಣವನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನೈ ಹೈಕೋರ್ಟ್ ಹೇಳಿದೆ.

ಕಳೆದ ವಾರದ ನಡೆದ ನೀಟ್ ಪರೀಕ್ಷೆಗಿಂತಲೂ ಮುಂಚೆ, ಪರೀಕ್ಷೆಯನ್ನು ಬರೆಯಲು ಹೊರಟಿದ್ದ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ನಟ ಸೂರ್ಯ “ಕೊರೊನಾ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯವನ್ನು ನೀಡುತ್ತಿರುವ ನ್ಯಾಯಾಲಯವು ವಿದ್ಯಾರ್ಥಿಗಳಿಗೆ ಭಯವಿಲ್ಲದೆ ಪರೀಕ್ಷೆಗಳನ್ನು ಪರೀಕ್ಷಿಸಲು ಆದೇಶಿಸುತ್ತದೆ” ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

“ನೀಟ್‌ನಂತಹ ಪರೀಕ್ಷೆಗಳು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೆ ಅವರ ಜೀವನವನ್ನೂ ಸಹ ಕಸಿದುಕೊಳ್ಳುತ್ತವೆ ಎಂದಿದ್ದ ಅವರು, ಕೊರೊನಾ ಸೋಂಕಿನಂತಹ ಸಾಂಕ್ರಾಮಿಕದ ಸಮಯದಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮತ್ತು ಅವರ ಯೋಗ್ಯತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಟ್ಟಿದ್ದು ನೋವಿನ ಸಂಗತಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಲ್ಲದೆ ಅಸಮಾನತೆಯನ್ನು ಸೃಷ್ಟಿಸುವ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರ ಶಾಸನಬದ್ಧಗೊಳಿಸುತ್ತಿದೆ. ಬಡ ವಿದ್ಯಾರ್ಥಿಗಳ ವಾಸ್ತವತೆ ತಿಳಿದಿಲ್ಲದವರು ಶೈಕ್ಷಣಿಕ ನೀತಿಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು.

ನಟ ಸೂರ್ಯ ಅವರ ವಿರುದ್ಧ ಚೆನ್ನೈ ಹೈಕೋರ್ಟ್ ನ್ಯಾಯಮೂರ್ತಿ ಸುಬ್ರಮಣ್ಯಂ ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು, “ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ” ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದ್ದರು.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಆದರೆ ನಟ ಸೂರ್ಯ ಅವರನ್ನು ಬೆಂಬಲಿಸಿ ಹೈಕೋರ್ಟ್ ಮಾಜಿ ನ್ಯಾಯಾಧೀಶರುಗಳಾದ ಕೆ. ಚಂದ್ರು, ಕೆ.ಎಂ. ಪಾಷಾ, ಡಿ. ಸ್ವಾತಂತ್ರ್ಯ, ಡಿ. ಹರಿಪ್ರಂದಮನ್, ಕೆ. ಕಣ್ಣನ್, ಜಿ.ಎಂ. ಅಕ್ಬರ್ ಅಲಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದು, ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದ್ದರು.

ಈ ಮಧ್ಯೆ ನ್ಯಾಯಾಮೂರ್ತಿ ಸುಬ್ರಮಣ್ಯಂ ಬರೆದ ಪತ್ರವನ್ನು ತಮಿಳುನಾಡಿನ ಅಡ್ವೊಕೇಟ್ ಜನರಲ್‌ಗೆ ಕಳುಹಿಸಲಾಗಿದ್ದು, ಅವರ ಅಭಿಪ್ರಾಯವನ್ನು ಕೋರಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಈ ವಿಷಯದಲ್ಲಿ ಯಾವುದೇ ಕ್ರಮಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವು ಮುಖ್ಯ ನ್ಯಾಯಮೂರ್ತಿ ಎ.ಪಿ. ಸಾಹಿ, ಸೆಂಥಿಲ್‌ಕುಮಾರ್, ರಾಮಮೂರ್ತಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಇಂದು ವಿಚಾರಣೆಗೆ ಬಂದಿದ್ದು, ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ತೆಗೆದುಕೊಳ್ಳುವುದಿಲ್ಲ ಎಂದು ಅದು ಹೇಳಿದೆ ಮತ್ತು ಆರೋಪಗಳನ್ನು ತಿರಸ್ಕರಿಸಿದೆ.

ಸೂರ್ಯನಂತಹ ಜನರು ನ್ಯಾಯಾಂಗದ ಮೇಲೆ ಟೀಕೆಗಳನ್ನು ಮಾಡುವ ಮೊದಲು ಅದು ನ್ಯಾಯಸಮ್ಮತವೇ ಅಥವಾ ಇಲ್ಲವೇ ಎಂದು ಯೋಚಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವಿಡಿಯೋ| ಸೂರ್ಯಸ್ನಾನದಿಂದ ಕೊರೊನ ಬರೋಲ್ಲ : ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...