Homeಕರ್ನಾಟಕಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ- ಕೆ.ಎನ್.ರಾಜಣ್ಣ

- Advertisement -
- Advertisement -

ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಉಭಯ ನಾಯಕರು ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಂಬುದನ್ನು ಸ್ಪಷ್ಪಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, “ನನ್ನ ಮತ್ತು ಜಯಚಂದ್ರ ನಡುವೆ ಕೆಲವು ಅಸಮಾಧಾನ ಇದ್ದುದು ನಿಜ. ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿಕೆ, ಇನ್ನಿತರ ವಿಷಯಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಪಕ್ಷದ ರಾಜ್ಯ ಮುಖಂಡರು ನಮ್ಮನ್ನು ಕರೆಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಗೊಂದಲಗಳು ಬಗೆಹರಿದಿವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲವನ್ನೂ ಮರೆತು ಶಿರಾ ಉಪಚುನಾವಣೆಯಲ್ಲಿ ಜಯಚಂದ್ರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

“ಹೈಕಮಾಂಡ್ ನಾಯಕರು ನಮ್ಮ ನಡುವಿನ ಗೊಂದಲಗಳನ್ನು ನಿವಾರಿಸಿರುವುದರಿಂದ ಸ್ವಾಭಿಮಾನದ ಪ್ರಶ್ನೆ ಉದ್ಭವಿಸುವುದಿಲ್ಲ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ. ನಾವು ಜೋಡೆತ್ತುಗಳು, ಒಂದೇ ಬಣ್ಣ ಒಂದೇ ರೀತಿಯ ಕೊಂಬುಗಳು ಇವೆ. ಹಾಗಾಗಿ ನಮ್ಮ ನಡುವೆ ವ್ಯತ್ಯಾಸ ಬರುವುದಿಲ್ಲ. ಮಂಡ್ಯ ಎತ್ತುಗಳು ಒಂದು ಕರಿಯ ಬಣ್ಣದ್ದು, ಮತ್ತೊಂದು ಬಿಳಿಯ ಬಣ್ಣದ್ದು. ಹಾಗಾಗಿ ಅಲ್ಲಿ ವ್ಯತ್ಯಾಸ ಬರುತ್ತದೆ. ಜಿಲ್ಲೆಯಲ್ಲಿ ಅಂತಹ ವ್ಯತ್ಯಾಸ ಬರುವುದಿಲ್ಲ” ಎಂದು ವ್ಯಾಖ್ಯಾನಿಸಿದರು.

“ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಬಿಪ್ರಾಯಗಳು ಇವೆ. ಅಸಮಾಧಾನವೂ ಇತ್ತು. ಇಂತಹ ಅಸಮಾಧಾನ, ಗೊಂದಲ ರಾಜಕಾರಣದಲ್ಲಿ ಸಹಜ. ಅವು ಬರುತ್ತವೆ ಹೋಗುತ್ತವೆ. ಪಕ್ಷ, ಜನರ ಹಿತದೃಷ್ಟಿ ಮತ್ತು ಮುಂದಿನ ಬೆಳವಣಿಗೆಗಳ ಹಿತದೃಷ್ಟಿಯಿಂದ ಒಂದಾಗಿ ಹೋಗಬೇಕೆಂದು ನಮ್ಮ ನಾಯಕರು ಹೇಳಿದ್ದಾರೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿಯ ವಿರೋಧಿ ಅಲೆ ಎದ್ದಿದೆ. ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಪ್ರಧಾನಿ ಮೋದಿ ಆಡಳಿತ ವಿರುದ್ಧ ಜನರ ತಿರುಗಿಬಿದ್ದಿದ್ದಾರೆ. ಮೋದಿ ಅಲೆ ಕೆಲಸ ಮಾಡುವುದಿಲ್ಲ. ಇತ್ತೀಚೆಗೆ ಮೋದಿ ವಿಡಿಯೋಗಳಿಗೆ ಜನ ಡಿಸ್ ಲೈಕ್ ಒತ್ತಿರುವುದು ಕಂಡುಬಂದಿದೆ. ಅಂದರೆ ಜನ, ಮೋದಿ ಅವರ ಆಡಳಿತವನ್ನು ಒಪ್ಪಿಕೊಂಡಿಲ್ಲ. ಹಾಗಾಗಿ ಶಿರಾದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಲಿದೆ. ಆಡಳಿತ ಪಕ್ಷ ಇದ್ದಾಗ ಶೇ.10ರಷ್ಟು ಮತಗಳು ಸರ್ಕಾರದ ಪರವಾಗಿ ಬೀಳುತ್ತವೆ. ಹಾಗಾಗಿ ಮೂರನೇ ಸ್ಥಾನ ಪಡೆಯಲಿದೆ ಎಂದು ಕೆ.ಎನ್‌.ರಾಜಣ್ಣ ವಿಶ್ಲೇಷಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಮಾಜಿ ಸಚಿವ ಹಾಗೂ ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, “ಜನರು ಮತ್ತು ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗಿ ಹೋಗಬೇಕಾಗಿದೆ. ಜಿಲ್ಲೆಯಲ್ಲಿ ಪರಮೇಶ್ವರ್, ಷಡಕ್ಷರಿ, ಕೆ.ಎನ್.ರಾಜಣ್ಣ ಮತ್ತು ನಮೆಗೆಲ್ಲ ವಯಸ್ಸಾಯಿತು. ಪಕ್ಷದ ಬೆಳವಣಿಗೆ ದೃಷ್ಟಿ ಮತ್ತು ಹೊಸ ನಾಯಕತ್ವದ ಹಿತದೃಷ್ಟಿಯಿಂದ ಹೊಂದಿಕೊಂಡು ಹೋಗಬೇಕು. ಇದು ಅನಿವಾರ್ಯ ಎಂಬುದು ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಕೆ.ಎನ್.ರಾಜಣ್ಣ ಮುಕ್ತವಾಗಿ ಮಾತನಾಡುತ್ತಾರೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡುತ್ತೀರಾ ಮತ್ತು ತಪ್ಪು ವ್ಯಾಖ್ಯಾನ ಮಾಡುತ್ತೀರ. ನಮ್ಮ ನಡುವೆ ಯಾವುದೇ ವ್ಯತ್ಯಾಸ ಇಲ್ಲ. ನಮ್ಮ ರಾಜಕೀಯ ಅನುಭವ ಬಳಸಿಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡಬೇಕು ಪಕ್ಷವನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಶಾಂತಲ ರಾಜಣ್ಣ, ಪುತ್ರ ಆರ್. ರಾಜೇಂದ್ರ ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...