Homeಮುಖಪುಟರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ '#KisanVirodhiNarendraModi' ಟ್ವೀಟಾಂದೋಲನ...

ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ…

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ, ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ. ಈ ವಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದು ರಾಜ್ಯಸಭೆಯಲ್ಲಿ ಅನುಮೋದನೆಗಾಗಿ ಇಂದು ಕಳುಹಿಸಿತ್ತು.

ವಿರೋಧ ಪಕ್ಷಗಳ ಖಂಡನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ) ಎಂದು ಟ್ವೀಟಾಂದೋಲನ ಆಗುತ್ತಿದೆ.

ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ

ಟ್ವಿಟ್ಟರ್‌ನಲ್ಲಿ ಈ ಹ್ಯಾಶ್‌ಟ್ಯಾಗ್ ಬಳಸಿ, ಈ ವರದಿ ಬರೆಯುವ ವೇಳೆಗೆ, ಸುಮಾರು 2.14 ಲಕ್ಷ ಟ್ವೀಟ್‌ಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದಾರೆ.

 

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.

“ರಾಕೇಶ್ ಯಾದವ್ ಟ್ವೀಟ್ ಮಾಡಿ, “ಮೋದಿ ಸರ್ಕಾರ ಯಾರ ಪರವಾಗಿದೆ? ನಿರುದ್ಯೋಗಿ ಯುವಕರು, ರೈತರು, ಐಐಟಿ/ಮೆಡಿಕಲ್ ವಿದ್ಯಾರ್ಥಿಗಳು, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು, ಸಣ್ಣ ಅಂಗಡಿ ಮಾಲೀಕರು,  ಎಲ್ಲರೂ ಅವರ ಮೇಲಿನ ಕೋಪವನ್ನು ಹೊರಹಾಕುತ್ತಿದ್ದಾರೆ. #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ, #StudentsLivesMatter (ವಿದ್ಯಾರ್ಥಿಗಳ ಬದುಕಿನ ವಿಷಯ), #speakup (ಮಾತನಾಡಿ)” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮೂರು ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ಪಂಜಾಬ್, ಹರಿಯಾಣ, ತೆಲಂಗಾಣ ಸೇರಿ ದೇಶದ ಹಲವೆಡೆ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಪಂಜಾಬ್‌ನಲ್ಲಿ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಹೊಸ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್‌ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.

ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ಸೆಪ್ಟಂಬರ್ 21ರಿಂದ ಕರ್ನಾಟಕ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿರುವ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲಾ ಒಟ್ಟಾಗಿ ಐಕ್ಯ ಹೋರಾಟ ನಡೆಸಬೇಕೆಂದು ಕರೆ ನೀಡಿವೆ. ಅಧಿವೇಶನ ನಡೆಯುವ ಪ್ರತಿದಿನವೂ ತಮ್ಮ ಪ್ರತಿಭಟನೆಯನ್ನು ಕೈಗೊಂಡು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿವೆ. ತುರ್ತಾಗಿ ಹಿಂಪಡೆಯಲೇಬೇಕಾದ ಮತ್ತು ಸುಗ್ರೀವಾಜ್ಞೆ ತಂದು ಜಾರಿಗೊಳಿಸಲು ಹೊರಟಿರುವ ಕೆಲವು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ, ‘ಇದು ರೈತರ ಅನುಕೂಲಕ್ಕಾಗಿ’ ಎಂದುಕೊಂಡು ಕೇಂದ್ರ ಸರ್ಕಾರ ಈ ಕಾನೂನುಗಳನ್ನು ಜಾರಿಗೆ ತಂದು, ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸುತ್ತದೆ ಎನ್ನುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ  ಮಸೂದೆಗಳ ಅಂಗೀಕಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ವಿಪಕ್ಷಗಳ ಮೇಲೆ ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...