Homeಕರ್ನಾಟಕರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ರಸ್ತೆಯಲ್ಲಿ ಅರೆಬೆತ್ತಲೆ ಕುಳಿತ ರೈತರು; ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ಇಂದು ದೇಶಕ್ಕೆ ಅನ್ನ ಕೊಡುತ್ತಿರುವುದು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಲ್ಲ, ಬದಲಿಗೆ ಈ ದೇಶದ ರೈತರಾಗಿದ್ದಾರೆ. ಇಂತಹ ರೈತ ವಿರೋಧಿ ಮಸೂದೆಗಳು ನಮಗೆ ಬೇಡ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಸರ್ಕಾರ ಜಾರಿಗೆ ತರುತ್ತಿರುವ ರೈತವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕದ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಸೇರಿ ಇಂದು ಬೆಂಗಳೂರಿನಲ್ಲಿ ಬೃಹತ್ ಐಕ್ಯ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ನುರಾರು ರೈತರು ರಸ್ತೆಯ ನಡುವೆ ಅರೆಬೆತ್ತಲೆ ಕುಳಿತು ಸರ್ಕಾರದ ರೈತವಿರೋಧಿ ಧೋರಣೆ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ಹೊರಟ ಹೋರಾಟಗಾರರನ್ನು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ಪೊಲೀಸರು ತಡೆದಾಗ ಹೋರಾಟಗಾರರು ರಸ್ತೆಯ ನಡುವೆಯೇ ಅರೆ ಬೆತ್ತಲೆ ಕುಳಿತು, ರಸ್ತೆ ತಡೆ ನಡೆಸಿದರು.

ಇಂದು ದೇಶಕ್ಕೆ ಅನ್ನ ಕೊಡುತ್ತಿರುವುದು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಲ್ಲ, ಬದಲಿಗೆ ಈ ದೇಶದ ರೈತರಾಗಿದ್ದಾರೆ. ಇಂತಹ ರೈತ ವಿರೋಧಿ ಮಸೂದೆಗಳು ನಮಗೆ ಬೇಡ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇರ ಪ್ರಸಾರ ಮಾಡಲು ಇಲ್ಲಿ ಕ್ಲಿಕ್ ಮಾಡಿ

https://www.facebook.com/watch/?v=672452536704037&extid=KPO1rMRrJPYJr2rd

ರೈತರಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಅವರನ್ನು ಅತಂತ್ರಗೊಳಿಸಲಾಗುತ್ತಿದೆ. ಭುಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಭೂಮಿ ಕಿತ್ತುಕೊಳ್ಳಲಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ನೀಡುತ್ತಿಲ್ಲ, ಇದು ರೈತ ವಿರೋಧಿ ಸರ್ಕಾರ ಎಂದು ರೈತರು ಅಸಮಾನಧಾನ ವ್ಯಕ್ತಪಡಿಸಿದರು.

ಬೃಹತ್ ಮೆರವಣಿಗೆಯನ್ನು ಪೊಲೀಸರು ತಡೆದಾಗ ಕೋಪೋದ್ರೋಕ್ತರಾದ ರೈತರು ತಮ್ಮ ಮೇಲು ಅಂಗಿಗಳನ್ನು ಕಳಚಿ ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ನಂತರ ರೈತರ ಒತ್ತಾಯಕ್ಕೆ ಮಣಿದ ಪೊಲೀಸರು ಮೆರವಣಿಗೆಗೆ ಅವಕಾಶಮಾಡಿಕೊಟ್ಟರು. ರೈತರು ಇದೀಗ ಫ್ರೀಡಂ ಪಾರ್ಕ್‌ ಕಡೆಗೆ ಮೆರವಣಿಗೆ ಹೊರಟಿದ್ದಾರೆ. ಅಲ್ಲಿ ಸರ್ಕಾರಕ್ಕೆ ಪ್ರತಿಯಾಗಿ ಪರ್ಯಾಯ ಅಧಿವೇಶನ ನಡೆಯಲಿದೆ.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೋರಾಟವನ್ನು ಮುನ್ನಡೆಸಿದರು. ಇದೇ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಯೋಗೇಂದ್ರ ಯಾದವ್‌ರವರು ಉಪಸ್ಥಿತರಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...