Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಬಾಲಿವುಡ್ ಚಿತ್ರೋದ್ಯಮವನ್ನು ಗುರಿಯಾಗಿಸಿಕೊಂಡಿರುವ ಬಲಪಂಥೀಯ ಗುಂಪುಗಳು, ನಟ ಅಮಿತಾಬ್‌ ಬಚ್ಚನ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಫೋಟೋವೊಂದನ್ನು ವೈರಲ್ ಮಾಡಿದ್ದಾರೆ.

ಡ್ರಗ್ಸ್ ವಿಚಾರದಲ್ಲಿ ಬಾಲಿವುಡ್ ಚಿತ್ರೋದ್ಯಮವನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ದ, ಸಂಸತ್ತಿನಲ್ಲಿ ಜಯ ಬಚ್ಚನ್ ಭಾಷಣ ಮಾಡಿದ ನಂತರ ಇದು ವೈರಲಾಗಿದ್ದು, ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಪ್ರೀಹಾ ರಾಯ್ ಚೌದರಿ ಎನ್ನುವವರು, “ಅಮಿತಾಬ್ ಅವರೊಂದಿಗೆ ಇರುವುದು ಯಾರು? ಯಾರು ಇದು ದಾವೂದ್ ಇಬ್ರಾಹಿಂ ಅಲ್ಲ ಎಂದು ಬೊಬ್ಬೆ ಹೊಡೆಯುತ್ತೀರೋ ಅವರು ತಮ್ಮ ಸ್ವಂತ ಮೊಬೈಲ್‌ ಮೂಲಕ ಗೂಗಲ್‌ನಲ್ಲಿ ಹುಡುಕಿ” ಎಂದು ಬರೆದಿದ್ದರು.

ಇದನ್ನೂ ಓದಿ: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದರ ಆರ್ಕೈವ್ ಇಲ್ಲಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ಇದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್

ವೈರಲಾಗುತ್ತಿರುವ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ ಇದು 2010 ರಲ್ಲಿ ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ಚಿತ್ರ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಪತ್ರಿಕೆಯು, “ರಾಜೀವ್ ಗಾಂಧಿ ಸೀ ಲಿಂಕ್‌ನ ಆಯೋಗದ ಸಮಾರಂಭದಲ್ಲಿ ಅಮಿತಾನ್ ಬಚ್ಚನ್ ಅವರೊಂದಿಗೆ ಅಶೋಕ್ ಚವಾಣ್” ಎಂದು ಅಡಿ ಬರಹ ನೀಡಿದೆ. ಇದನ್ನು ಪಿಟಿಐ ಕ್ಲಿಕ್ಕಿಸಿದೆ. ಅಶೋಕ್‌ ಚವಾಣ್‌ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.

ಪತ್ರಿಕೆಯ ಸ್ಕ್ರೀನ್‌ಶಾರ್ಟ್

ಅಷ್ಟೇ ಅಲ್ಲದೆ ಪಿಟಿಐ ಆರ್ಕೈವ್‌ಗಳಲ್ಲಿ ಕೂಡಾ ಇದನ್ನು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ, ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ಕೂಡ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಸ್ಫಷ್ಟೀಕರಣ ನೀಡಿ, ಈ ಚಿತ್ರದಲ್ಲಿ ತನ್ನ ತಂದೆಯ ಜೊತೆ ಇರುವುದು ಅಶೋಕ್ ಚವಾಣ್, ದಾವೂದ್ ಇಬ್ರಾಹಿಂ ಅಲ್ಲ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಜಯ ಬಚ್ಚನ್ ಅವರ ಭಾಷಣದ ಹಿನ್ನೆಲೆಯಲ್ಲಿ ಹಳೆಯ, ಸಂಬಂಧವಿಲ್ಲದ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರದಲ್ಲಿ ಇರುವುದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಆಗಿದ್ದಾರೆಯೆ ವಿನಃ ದಾವೂದ್ ಇಬ್ರಾಹಿಂ ಅಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...