ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 75,083 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 55,62,663ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,053 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 88,935ಕ್ಕೆ ಏರಿಕೆಯಾಗಿದೆ.
ಈ ನಡುವೆಯೂ ಭಾರತದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗುತ್ತಿದ್ದು, ಈಗ ದೇಶದಲ್ಲಿ 9,75,861 ಪ್ರಕರಣಗಳು ಮಾತ್ರ ಸಕ್ರಿಯವಾಗಿದ್ದು, 44,97,868 ಮಂದಿ ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1,01,468. ಅಂದರೆ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.
ಇದನ್ನೂ ಓದಿ: ವಿಧಾನಸಭಾ ಅಧಿವೇಶನ ಲೈವ್; ಕೊರೊನಾ ನಿರ್ವಹಣೆ ಬಗ್ಗೆ ಸಿದ್ದರಾಮಯ್ಯ ಮಾತು
?#COVID19 India Tracker
(As on 22 September, 2020, 08:00 AM)➡️Confirmed cases: 55,62,663
➡️Recovered: 44,97,867 (80.9%)?
➡️Active cases: 9,75,861 (17.5%)
➡️Deaths: 88,935 (1.6%)#IndiaFightsCorona#IndiaWillWin#StaySafeVia @MoHFW_INDIA pic.twitter.com/dtJpIuUfKh
— #IndiaFightsCorona (@COVIDNewsByMIB) September 22, 2020
ಕಳೆದ ಮೂರು ದಿನಗಳಿಂದ ದೇಶದಲ್ಲಿ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದಾರೆ. ಮೂರು ದಿನಗಳಲ್ಲೂ ಹೊಸ ಸೋಂಕಿತರ ಪ್ರಕರಣಗಳಿಗಿಂತ ಬಿಡುಗಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ 9,33,185 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್ ತಿಳಿಸಿದೆ.
? Increasing gap between #COVID19 Recovered & Active cases of India (May 04, 2020 to September 22, 2020)?#StaySafe #IndiaWillWin pic.twitter.com/lyiKGMUOKA
— #IndiaFightsCorona (@COVIDNewsByMIB) September 22, 2020
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 9,925 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರು.


