ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟವು ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆಯುತ್ತಿದ್ದು, ಎರಡನೆ ದಿನವು ಮುಂದುವರೆದಿದೆ. ತಮ್ಮ ಹೋರಾಟವನ್ನು, “ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ” ಎಂದು ಐಕ್ಯ ಹೋರಾಟ ಸಮಿತಿಯು ಕರೆದಿದ್ದು, ಇಂದು ಭೂಮಿ, ವಸತಿ ಹಕ್ಕು ವಂಚಿತರ ವಿಚಾರವಾಗಿ ಪ್ರತಿಭಟನಾಕಾರರು ತಮ್ಮ ನಿರ್ಣಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.
ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ
ಭೂಮಿ ವಸತಿ ಹಕ್ಕು ವಂಚಿತರು ಇಂದು ’ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು’ ಎಂದು ಘೋಷಿಸಿದ್ದು, ತಮ್ಮ ನಿರ್ಣಯಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
- ಯಾವುದೇ ಕಾರಣಕ್ಕೂ ಬಡಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲಿ ಒಕ್ಕಲೆಬ್ಬಿಸಬಾರದು.
- ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.
- ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.
- ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.
- ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.
- ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.
ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.
ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್
ವಿಡಿಯೋ ನೋಡಿ:
’ಜನತಾ ಅಧಿವೇಶನ’ವನ್ನು ಬೆಂಬಲಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.
Posted by Naanu Gauri on Tuesday, September 22, 2020


