Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ "ರಾಜಕೀಯ ಡಿಎನ್‌ಎ"ಯಲ್ಲಿ ಏನೋ ದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ 2015 ರಲ್ಲಿ ಹೇಳಿದ್ದು, ಈಗ ಬ್ಯಾನರ್‌ ರೂಪದಲ್ಲಿ ರಾರಾಜಿಸುತ್ತಿದೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ವಾರದಲ್ಲಿ ಮತದಾನದ ದಿನಾಂಕ ಪ್ರಕಟವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಚುನಾವಣಾ ಆಯೋಗದ ಕಡೆಗಿದೆ. ಈ ನಡುವೆ ಅನಾಮಧೇಯ ಬ್ಯಾನರ್‌ಗಳು ಅಡಳಿತಾರೂಢ ಪಕ್ಷಗಳನ್ನು ಕಾಡಲು ಪ್ರಾರಂಭಿಸಿವೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸುಮಾರು 5 ವರ್ಷಗಳ ಹಿಂದೆ ನೀಡಿದ್ದ ವಿವಾದಾತ್ಮಕ “ಡಿಎನ್‌ಎ” ಹೇಳಿಕೆ ಈಗ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ  ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (NDA) ಕಾಡಲು ಮತ್ತೆ ಬ್ಯಾನರ್‌ ರೂಪದಲ್ಲಿ ರಸ್ತೆಗಳಿಗಿಳಿದಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ – ಜೆಡಿಯು ನಡುವೆ ಸ್ಥಾನ ಹಂಚಿಕೆ ಮಾತುಕತೆ

ನಿನ್ನೆ ಬೆಳಿಗ್ಗೆ ಪಾಟ್ನಾದಲ್ಲಿ ಮೋದಿಯವರ ಡಿಎನ್‌ಎ ಹೇಳಿಕೆ ಆಧಾರಿತ ದೊಡ್ಡ ವರ್ಣರಂಜಿತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಂಡವು. ಬಿಜೆಪಿ ಮತ್ತು ಜೆಡಿಯು ಪಕ್ಷಗಳ ಮುಖಂಡರುಗಳು ಮುಜುಗರಕ್ಕಿಡು ಮಾಡುವಂತೆ ಮೋದಿ ಹೇಳಿಕೆಯನ್ನು ಬ್ಯಾನರ್‌ನಲ್ಲಿ ಹೈಲೈಟ್ ಮಾಡಲಾಗಿದೆ.

PC: Oneindia Hindi

2015ರ ಜುಲೈನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಿತೀಶ್ ಕುಮಾರ್ ‌ ಡಿಎನ್‌ಎನಲ್ಲಿ ಏನೋ ತೊಂದರೆ ಇದೆ ಎಂದಿದ್ದರು. ಈ ವಾಕ್ಯವನ್ನು ಬ್ಯಾನರ್‌ನಲ್ಲಿ ಹೈಲಟ್ ಮಾಡಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ “ನಿತೀಶ್ ಕುಮಾರ್ ಕೆ ಡಿಎನ್‌ಎ ಮೇ ಹೇ ಗಡ್‌ಭಡ್‌ ಹೈ”.  ಬ್ಯಾನರ್‌ಗಳಲ್ಲಿ ಬಳಸಲಾದ ಮತ್ತೊಂದು ಸಾಲು ಕುಮಾರ್ ಅವರ ನಂಬಿಕೆಯನ್ನು ಪ್ರಶ್ನಿಸಿದೆ: “ಮಾರ್ತೆ ರಹೆ ಬಸಾ ಪಲಟಿ, ನಿತೀಶ್ ಕಿ ಹರ್ ಬಾತ್ ಕಚ್ಚಿ” ಎಂಬ ವಾಕ್ಯಗಳನ್ನು ಬ್ಯಾನರ್‌ನಲ್ಲಿ ಬಳಸಲಾಗಿದೆ. ವಿಶೇಷವೆಂದರೆ, ಬ್ಯಾನರ್‌ಗಳ ಪ್ರಾಯೋಜಕರ ಹೆಸರನ್ನು ಉಲ್ಲೇಖಿಸಲಾಗಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

2015 ರಲ್ಲಿ ಪಾಟ್ನಾದಿಂದ 75 ಕಿ.ಮೀ ದೂರದಲ್ಲಿರುವ ಮುಜಾಫರ್ಪುರದಲ್ಲಿ ನಡೆದ ಪರಿವರ್ತನಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ನಿತೀಶ್ ಕುಮಾರ್ ಅವರ “ರಾಜಕೀಯ ಡಿಎನ್‌ಎ”ಯಲ್ಲಿ ಏನಾದರೂ ದೋಷವಿದೆಯೇ ಎಂದಿದ್ದರು.

’ಅವರು ಬಿಜೆಪಿಯಿಂದ ತಮ್ಮ ಬೆಂಬಲ ಹಿಂಪಡೆದುಕೊಂಡಾಗ ನನಗೆ ನೋವುಂಟಾಗಿತ್ತು( 2013ರಲ್ಲಿ ಜೆಡಿ-ಯು ಬಿಜೆಪಿಯಿಂದ ವಿಭಜನೆಯಾಗಿತ್ತು) ಆದರೆ ಮಾಜಿ ಮುಖ್ಯಮಂತ್ರಿ ಜಿತಾನ್ ರಾಮ್ ಮಾಂಜಿ ಅಂತಹವರೊಂದಿಗೂ ಅದೇ ರೀತಿ ಮಾಡಿದಾಗ, ಅವರ ರಾಜಕೀಯ ಡಿಎನ್‌ಎಯಲ್ಲಿ ಏನಾದರೂ ದೋಷವಿದೆ ಎಂದು ನಾನು ಕಂಡುಕೊಂಡೆ’ ಎಂದು ಮೋದಿ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಜೆಡಿಯು ಮುಖ್ಯಸ್ಥರು ಇದನ್ನು ಬಿಹಾರದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿದ್ದರು. ಮೋದಿಯವರು ತಮ್ಮ ವಿರುದ್ಧದ ಡಿಎನ್‌ಎ ಹೇಳಿಕೆಯನ್ನು ಹಿಂಪಡೆಯುವಂತೆ ಹೇಳಿ, ಈ ಹೇಳಿಕೆಯ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮೈತ್ರಿ ಬಿಜೆಪಿಯನ್ನು ಸೋಲಿಸಿ ಜಯಗಳಿಸಿತ್ತು. ಆದರೆ ನಿತೀಶ್ ಕುಮಾರ್ ಅವರು ಮೈತ್ರಿಯನ್ನು ಕೈಬಿಟ್ಟು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸಿ 2017 ರ ಜುಲೈನಲ್ಲಿ ಹೊಸ ಸರ್ಕಾರವನ್ನು ರಚಿಸಿದ್ದರು.

PC:Zee News

ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೋದಿ ಮತ್ತು ಕುಮಾರ್ ಅವರನ್ನು ಗುರಿಯಾಗಿಸುವ ಇತ್ತೀಚಿನ ಬ್ಯಾನರ್‌ಗಳು ಹಠಾತ್ತನೆ ಕಾಣಿಸಿಕೊಂಡಿದ್ದು, ಇದು ಪ್ರತಿಪಕ್ಷ ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿ ಮತ್ತು ಎನ್‌ಡಿಎ ನಡುವಿನ ಬ್ಯಾನರ್‌ ಯುದ್ಧ ಎಂದೇ ಭಾವಿಸಲಾಗುತ್ತಿದೆ.

ಬಿಹಾರದ ರಾಜಕೀಯ ವಿಶ್ಲೇಷಕ ಎ.ಕೆ.ಮಿಶ್ರಾ ಹೇಳುವಂತೆ, ಪ್ರತಿಪಕ್ಷ ಮಹಾಮೈತ್ರಿ ಮತ್ತು ಆಡಳಿತಾರೂಢ ಎನ್‌ಡಿಎ ನಡುವಿನ ಬ್ಯಾನರ್‌ಗಳು ಮತ್ತು ಪೋಸ್ಟರ್‌ ಯುದ್ಧವು ರಾಜ್ಯದಾದ್ಯಂತಾ ತೀವ್ರಗೊಳ್ಳುತ್ತದೆ. ಇದು ಅವರ ಬೆಂಬಲಿಗರು ಮತ್ತು ಮತದಾರರಿಗೆ ರಾಜಕೀಯ ಸಂದೇಶವನ್ನು ಕಳುಹಿಸುವ ಕಾರ್ಯತಂತ್ರದ ಒಂದು ಭಾಗವಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗಲಿ ಆಗ ಇನ್ನೂ ಇಂತಹ ಅನೇಕ ಬ್ಯಾನರ್ ಮತ್ತು ಹೋರ್ಡಿಂಗ್ ಬರಲಿವೆ ಎನ್ನುತ್ತಾರೆ.


ಇದನ್ನೂ ಓದಿ: ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...